Thursday, October 10, 2024
spot_imgspot_img
spot_imgspot_img

ಉಡುಪಿ : ಹೊಳಪು ಹೆಚ್ಚಿಸಲು ಹೋಗಿ ಚಿನ್ನ ಕಳೆದುಕೊಂಡ ವೃದ್ದೆ..!

- Advertisement -
- Advertisement -

ಉಡುಪಿ : ಗೋಲ್ಡ್‌ ಸಂಸ್ಥೆಯ ಉಚಿತ ಕೊಡುಗೆಯೆಂದು ಯುವಕನೊಬ್ಬ ಚಿನ್ನದ ಕೈ ಬಳೆಯ ಹೊಳಪನ್ನು ಹೆಚ್ಚಿಸುವುದಾಗಿ ಹೇಳಿ ವೃದ್ಧೆಗೆ ವಂಚಿಸಿದ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಬೈಲಕರೆಯಲ್ಲಿ ಸಂಭವಿಸಿದೆ.

ಬೈಲಕರೆಯ ಕಲ್ಯಾಣಿ ಜತ್ತನ್‌ ಮನೆಯ ವೃದ್ದೆ ಚಿನ್ನಕಳಕೊಂಡ ಸಂತ್ರಸ್ಥೆಯಾಗಿದ್ದಾರೆ. ಪುರುಷರು ಮನೆಯಲ್ಲಿ ಇಲ್ಲದಿರುವುದನ್ನು ಖಚಿತಪಡಿಸಿಕೊಂಡು ಬ್ಯಾಗ್‌ ಹಾಕಿಕೊಂಡು ಬಂದಿದ್ದ ಯುವಕ ತಾನು ಪ್ರತಿಷ್ಠಿತ ಗೋಲ್ಡ್‌ ಸಂಸ್ಥೆಯಿಂದ ಬಂದಿದ್ದು, ಬೆಳ್ಳಿ-ಬಂಗಾರ ಸಹಿತ ಹಲವು ವಸ್ತುಗಳನ್ನು ಸ್ವಚ್ಛಗೊಳಿಸಿ ಹೊಳಪು ನೀಡುವ ಪೌಡರ್‌ ಮಾರಾಟ ಮಾಡುವುದಾಗಿ ಕಲ್ಯಾಣಿ ಅವರಲ್ಲಿ ಹೇಳಿ ನಂಬಿಸಿದ್ದ. ಪಾಲಿಶ್‌ ಮಾಡುವ ಮಾದರಿ ತೋರಿಸುವುದಾಗಿ ಮೊದಲಿಗೆ ತುಳಸಿಕಟ್ಟೆಯಲ್ಲಿದ್ದ ದೀಪದ ಸ್ಟಾಂಡಿಗೆ ಪುಡಿಯೊಂದನ್ನು ತಿಕ್ಕಿ ಅದನ್ನು ಶುಭ್ರ ಮಾಡಿ ತೋರಿಸಿದ್ದಾನೆ.

ಬಳಿಕ ಆತ ಮಹಿಳೆಯ ಕೈಯಲ್ಲಿದ್ದ 3 ಪವನಿನ 2 ಚಿನ್ನದ ಬಳೆಗಳನ್ನು ನೋಡಿ ಹೊಳಪು ಮಾಡಿಕೊಡುವ ಬಗ್ಗೆ ನಯವಾದ ಮಾತುಗಳಿಂದ ನಂಬಿಸಿದ್ದಾನೆ. ಆತ ದ್ರಾವಣವಿದ್ದ ಪಾತ್ರೆಯೊಂದರಲ್ಲಿ ಚಿನ್ನವನ್ನು ಹಾಕಿ ಬೆಂಕಿಯಲ್ಲಿ ಕಾಯಿಸಿದ್ದಾನೆ. ಜತೆಗೆ ಮಹಿಳೆಯ ಕತ್ತಿನಲ್ಲಿದ್ದ ಸರವನ್ನು ಹೊಳಪು ಮಾಡಿಕೊಡುವುದಾಗಿ ಹೇಳಿದ. ಆದರೆ ಮಹಿಳೆ ಅದಕ್ಕೆ ಒಪ್ಪಲಿಲ್ಲ. ಬಳೆಯನ್ನು ಅನಂತರ ಪೇಪರ್‌ನಲ್ಲಿ ಕಟ್ಟಿ, 15 ನಿಮಿಷ ಬಿಟ್ಟು ತೆಗೆಯಲು ಹೇಳಿ ಮಹಿಳೆಯ ಕೈಗಿತ್ತ. ಇದಕ್ಕೆ ಶುಲ್ಕ ಇಲ್ಲ. ಇದು ನಮ್ಮ ಗೋಲ್ಡ್‌ ಸಂಸ್ಥೆಯ ಉಚಿತ ಕೊಡುಗೆ ಎಂದು ಹೇಳಿ ಆತ ಅಲ್ಲಿಂದ ಕಾಲ್ಕಿತ್ತಿದ್ದ. ಅನಂತರ ಕಲ್ಯಾಣಿ ಜತ್ತನ್‌ ಅವರು ಚಿನ್ನದ ಬಳೆಯನ್ನು ಬಿಡಿಸಿ ತೆಗೆದಾಗ ಕೆಲವು ಕಡೆ ಕರಗಿದ ಹಾಗೆ ಇತ್ತು. ತತ್‌ಕ್ಷಣ ಅವರು ತನ್ನ ಮಗನಿಗೆ ಈ ಬಗ್ಗೆ ಮಾಹಿತಿ ನೀಡಿದರು.
ವಂಚಕ ಚಿನ್ನದಂಶವನ್ನು ದ್ರವ ಮಾದರಿಯಲ್ಲಿ ಸಂಗ್ರಹಿಸಿ ಪಡೆದು ಪರಾರಿಯಾಗಿದ್ದ ಎನ್ನಲಾಗಿದೆ. ಮನೆಮಂದಿ ಪರಿಸರದವರೊಂದಿಗೆ ಸೇರಿ ಹುಡುಕಾಟ ನಡೆಸಿದರೂ ವಂಚಕನ ಸುಳಿವು ಸಿಕ್ಕಿಲ್ಲ. ಆತ ಪರಾರಿಯಾಗಿದ್ದ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!