Saturday, June 6, 2026
spot_imgspot_img
spot_imgspot_img

20 ವರ್ಷಗಳ ಹಿಂದೆ ದೇವಸ್ಥಾನದ ಚಿನ್ನದ ಮೂರ್ತಿ ಕಳವುಗೈದ ನಟೋರಿಯಸ್‌ ಆರೋಪಿಯನ್ನು ಬಂಧಿಸಿದ ಪೊಲೀಸರು : ಬಂಟ್ವಾಳ ಗ್ರಾಮಾಂತರ ಇನ್ಸ್‌ಪೆಕ್ಟರ್‌ ಶಿವಕುಮಾರ್‌ ನೇತೃತ್ವದಲ್ಲಿ ಕೇರಳದಲ್ಲಿ ಬಂಧನ..!

- Advertisement -
- Advertisement -

ಬಂಟ್ವಾಳ: 20 ವರ್ಷಗಳ ಹಿಂದೆ ದೇವಸ್ಥಾನದ ಚಿನ್ನದ ಮೂರ್ತಿ ಕಳವುಗೈದ ನಟೋರಿಯಸ್‌ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಇನ್ಸ್‌ಪೆಕ್ಟರ್‌ ಶಿವಕುಮಾರ್‌ ನೇತೃತ್ವದಲ್ಲಿ ಬಂಧಿಸಿದ ಘಟನೆ ನಡೆದಿದೆ.

ಪುತ್ತೂರು ತಾಲ್ಲೂಕು ಉಡ್ಡಂಗಳ ಮನೆ ಮೊಹಮ್ಮದ್‌ ಶರೀಫ್ ( 44 ) ಬಂಧಿತ ಆರೋಪಿ.

ಬಂಟ್ವಾಳ ಗ್ರಾಮಾಂತರ ಠಾಣೆಗೆ ಸಂಬಂದಿಸಿ ದಿನಾಂಕ 07.11.2004 ರಂದು ಬಂಟ್ವಾಳ ತಾಲ್ಲೂಕಿನ ಬಡಗಬೆಳ್ಳೂರು ಗ್ರಾಮದ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನ ಕಳ್ಳತನ ಪ್ರಕರಣದಲ್ಲಿ ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡು ಕರ್ನಾಟಕ ಮತ್ತು ಕೇರಳ ರಾಜ್ಯದಲ್ಲಿ ಹಲವಾರು ವಿಳಾಸ, ಬದಲಾವಣೆ ಮಾಡಿಕೊಂಡು ಬಂಧನಕ್ಕೆ ಸಿಗದೇ ಪ್ರಸ್ತುತ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಪುತ್ತಿಗೆ ಎಂಬಲ್ಲಿ ವಾಸವಾಗಿದ್ದ ಆರೋಪಿಯನ್ನು ಪತ್ತೆಮಾಡಲು ಬೇರೆ ಬೇರೆ ಆಯಾಮಗಳಿಂದ ಮಾಹಿತಿ ಕಲೆಹಾಕಿ ಇಂದು ಕಾಸರಗೋಡುನಿಂದ ವಶಕ್ಕೆ ಪಡೆಯಲಾಗಿದೆ.

ಆರೋಪಿ ನಟೋರಿಯಸ್‌ ಕ್ರಿಮಿನಲ್‌ ಆಗಿದ್ದು, ಕೇರಳದಲ್ಲಿ ನಡೆದ ಕೊಲೆ ಕೇಸಿನ ಆರೋಪಿಯು ಆಗಿದ್ದು, ಇತ್ತೀಚೆಗೆ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದನು.

ಸದ್ರಿ ಎಲ್ ಪಿಸಿ ಪ್ರಕರಣಕ್ಕೆ ಸಂಬಂಧಿಸಿ ಮಾನ್ಯ ನ್ಯಾಯಾಲಯವು ಮೊಹಮ್ಮದ್ ಶರೀಫ್ ಗೆ ನ್ಯಾಯಾಂಗ ಬಂಧನ ವಿಧಿಸಿತ್ತು,

ಈ ಕಾರ್ಯಚರಣೆಯಲ್ಲಿ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರಾದ ವಿಜಯಪ್ರಸಾದ್ ರವರ ಮಾರ್ಗದರ್ಶನದಲ್ಲಿ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ನಿರೀಕ್ಷಕರಾದ ಶಿವಕುಮಾರ್ ರವರ ನೇತೃತ್ವದಲ್ಲಿ ಪಿಎಸ್ಐ ರವರುಗಳಾದ ಹರೀಶ್ ಎಂ ಆರ್ ಮತ್ತು ಮೂರ್ತಿ ಹಾಗೂ ಸಿಬ್ಬಂದಿ ಯವರಾದ ಹರಿಶ್ಚಂದ್ರ ಮತ್ತು ಗಣೇಶ ರವರು ಪಾಲ್ಗೊಂಡಿದ್ದರು.

ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರ ಈ ಕಾರ್ಯಾಚರಣೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

- Advertisement -

Related news

error: Content is protected !!