Friday, June 5, 2026
spot_imgspot_img
spot_imgspot_img

‘ಹಾಲಿನ ದರ 10 ರೂ. ಏರಿಕೆ ಮಾಡಬೇಕೆಂಬ ಬೇಡಿಕೆ ಇದೆ’; ಸಚಿವ ಕೆ.ವೆಂಕಟೇಶ್

- Advertisement -
- Advertisement -

ಬೆಂಗಳೂರು: ಈಗಾಗಲೇ ಬಸ್ ಟಿಕೆಟ್ ದರ ಏರಿಕೆ ಮಾಡಿ ಸರ್ಕಾರ ಜನರಿಗೆ ಶಾಕ್ ನೀಡಿದ ಬೆನ್ನಲ್ಲೇ ಮತ್ತೊಂದು ಶಾಕ್ ನೀಡಲು ತಯಾರಿ ನಡೆಸುತ್ತಿದೆ. ಶೀಘ್ರವೇ ಹಾಲಿನ ದರವನ್ನು ಏರಿಕೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಕೆ.ವೆಂಕಟೇಶ್ ಸುಳಿವು ನೀಡಿದ್ದಾರೆ.

ಹಾಲಿನ ದರ ಏರಿಕೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲಿನ ದರ ಹೆಚ್ಚಳ ಮಾಡಬೇಕು ಎಂದು ರೈತರ ಒತ್ತಾಯ ಇದೆ. ಯಾಕೆಂದರೆ ರೈತರು ಜಾನುವಾರುಗಳಿಗೆ ನೀಡುತ್ತಿರುವ ಆಹಾರ ಪದಾರ್ಥಗಳ ಬೆಲೆ ಏರಿಕೆ ಆಗಿದೆ. ಈ ಹಿನ್ನೆಲೆ ಹಾಲಿನ ದರ 10 ರೂ. ಏರಿಕೆ ಮಾಡಿ ಎಂದು ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ನಾವಿನ್ನೂ ಚರ್ಚೆ ಮಾಡುತ್ತಿದ್ದೇವೆ. ಚರ್ಚೆ ಬಳಿಕ ಅಂತಿಮ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.

ರೈತರು ಹಾಲಿನ ಮೇಲೆ ಅವಲಂಬಿತರಾಗಿದ್ದಾರೆ. ದಿನೇ ದಿನೇ ಹಾಲಿನ ಉತ್ಪಾದನೆ ಹೆಚ್ಚಳ ಆಗುತ್ತಿದೆ. ರೈತರಿಗೆ ಅನ್ಯಾಯ ಆಗದಂತೆ ನೋಡಿಕೊಳ್ಳಬೇಕು. 5 ರೂ, 3 ರೂ, 10 ರೂ. ಮಾಡುತ್ತೇವೋ ಅದು ಇನ್ನೂ ತೀರ್ಮಾನವಾಗಿಲ್ಲ ಎಂದರು.

- Advertisement -

Related news

error: Content is protected !!