Monday, May 6, 2024
spot_imgspot_img
spot_imgspot_img

ಕೆಟ್ಟು ನಿಂತ ಲಾರಿಗೆ ಬೈಕ್ ಢಿಕ್ಕಿ ಹೊಡದು ಸವಾರ ಮೃತ್ಯು

- Advertisement -G L Acharya panikkar
- Advertisement -

ನೆಲ್ಯಾಡಿ : ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಣ್ಣಂಪಾಡಿ ಎಂಬಲ್ಲಿ ನಡೆದಿದೆ. ಮೃತನನ್ನು ನೆಲ್ಯಾಡಿ ಮೊರಂಕಳ ನಿವಾಸಿ ಇಕ್ಬಾಲ್ ಎಂದು ಗುರುತಿಸಲಾಗಿದೆ.

ಇಕ್ಬಾಲ್ ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಸಣ್ಣಂಪಾಡಿ ಸಮೀಪ ಕೆಟ್ಟು ನಿಂತಿದ್ದ ಪಾರ್ಸೆಲ್ ಸಾಗಾಟದ ವಾಹನಕ್ಕೆ ಹಿಂದಿನಿಂದ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿದ್ದಾರೆ.

- Advertisement -

Related news

error: Content is protected !!