Sunday, May 19, 2024
spot_imgspot_img
spot_imgspot_img

ರೇವಣ್ಣ ನಿವಾಸದಲ್ಲಿ ಸಂತ್ರಸ್ತೆ ಸಮ್ಮುಖದಲ್ಲಿ ಮಹಜರು ನಡೆಸಿದ ಎಸ್ಐಟಿ

- Advertisement -G L Acharya panikkar
- Advertisement -

ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಬಸವನಗುಡಿಯಲ್ಲಿರುವ ಎಚ್.ಡಿ.ರೇವಣ್ಣ ಅವರ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು ನಡೆಸಿದರು. ಕೆ.ಆ‌ರ್.ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರನ್ನು ಬಂಧಿಸಿರುವ ಅಧಿಕಾರಿಗಳು, ಮೇ 8ರವರೆಗೆ ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದ್ದಾರೆ. ಅರಮನೆ ರಸ್ತೆಯಲ್ಲಿರುವ ಸಿಐಡಿ ಕಟ್ಟಡದ ಸೆಲ್‌ನಲ್ಲಿ ಇರಿಸಿ ವಿಚಾರಣೆ ನಡೆಸುತ್ತಿದ್ದಾರೆ.

ರೇವಣ್ಣ ನಿವಾಸಕ್ಕೆ ನಾಲ್ವರು ಮಹಿಳಾ ಅಧಿಕಾರಿಗಳು ಸೇರಿ ಆರು ಮಂದಿ ಅಧಿಕಾರಿಗಳ ತಂಡದೊಂದಿಗೆ ಸಂತ್ರಸ್ತೆ ಆಗಮಿಸಿದ್ದಾರೆ. ಈ ವೇಳೆ ಸಂತ್ರಸ್ತೆಯ ಹೇಳಿಕೆ, ಮಹಜರು ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಚಿತ್ರೀಕರಣ ಮಾಡಲಾಯಿತು.

ಮಹಜರು ಪ್ರಕ್ರಿಯೆ ನಡೆಸುವ ಮೊದಲು ಮುಂಜಾಗ್ರತಾ ಕ್ರಮವಾಗಿ ರೇವಣ್ಣ ನಿವಾಸಕ್ಕೆ ಬ್ಯಾರಿಕೇಡ್‌ ಹಾಕಲಾಗಿತ್ತು. ಇನ್ನು ಬಸವನಗುಡಿ ಪೊಲೀಸರು ರೇವಣ್ಣ ನಿವಾಸದ ಬಳಿ ಬಿಗಿಭದ್ರತೆ ಏರ್ಪಡಿಸಿದ್ದರು.

- Advertisement -

Related news

error: Content is protected !!