Sunday, June 7, 2026
spot_imgspot_img
spot_imgspot_img

ರೈತರಿಗೆ ನೀಡಿದ್ದ ವಕ್ಫ್ ನೋಟಿಸ್ ವಾಪಸ್‌ಗೆ ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ವಕ್ಫ್ ಆಸ್ತಿ ವಿವಾದ ಭುಗಿಲೆದ್ದಿದೆ. ಈ ನಡುವೆ ರೈತರಿಗೆ ನೀಡಲಾಗಿರುವ ವಕ್ಫ್ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್‌ ಸೂಚನೆ ನೀಡಿದ್ದು ಅಧಿಕೃತ ಆದೇಶವೂ ಹೊರಡಿಸಲಾಗಿದೆ.

ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟಿಸ್‌ಗಳನ್ನು ತಕ್ಷಣ ವಾಪಸ್‌ ಪಡೆಯಿರಿ. ರೈತರ ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು ಎಂದು ಸೂಚನೆ ನೀಡಿದ್ದಾರೆ. ಜೊತೆಗೆ ಕೆಲ ದಿನಗಳ ಹಿಂದೆ ಕಾನೂನು ಬಾಹಿರವಾಗಿ ಹಾಗೂ ನೋಟಿಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು ಎಂದು ಸೂಚಿಸಿದ್ದರು.

ರಾಜ್ಯದಲ್ಲಿ ರೈತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ ಈ ಘಟನೆಗಳಿಂದ ಎಚ್ಚೆತ್ತುಕೊಂಡ ಸರ್ಕಾರ ರೈತರಿಗೆ ನೀಡಿದ್ದ ನೋಟಿಸ್‌ನ್ನು ಅಧಿಕೃತವಾಗಿ ವಾಪಾಸ್ ಪಡೆದುಕೊಂಡಿದೆ.

- Advertisement -

Related news

error: Content is protected !!