ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ವಜಾಗೊಳಿಸುವಂತೆ ಕಾಲೇಜಿನ ವಿದ್ಯಾರ್ಥಿ ಸಂಘಟನೆಯಿಂದ ಮನವಿ- ತಿರಸ್ಕರಿಸಿದಲ್ಲಿ ಉಗ್ರ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ ವಿದ್ಯಾರ್ಥಿ ಸಂಘ

ಪುತ್ತೂರು: ಪುತ್ತೂರಿನ ಸರಕಾರಿ ಪದವಿಪೂರ್ವ ಕಾಲೇಜು ಕೊಂಬೆಟ್ಟು ಇಲ್ಲಿ ನಡೆದ ಚೂರಿ ಇರಿತ ಪ್ರಕರಣ ವಿದ್ಯಾರ್ಥಿನಿಯೊರ್ವಳ ಕಟ್ಟು ಕಥೆಯು ಪುತ್ತೂರಿನಲ್ಲಿ ಮೊನ್ನೆಯಿಂದ ಸಂಚಲನ ಸೃಷ್ಟಿಸಿತ್ತು. ವಿದ್ಯಾರ್ಥಿನಿಯ ಈ ಕಟ್ಟು ಕಥೆ ಸಮಾಜದಲ್ಲಿ ಕೋಮು ಗಲಭೆ ಸೃಷ್ಟಿಸುವ ಪೂರ್ವ ನಿಯೋಜಿತ ಕೃತ್ಯ. ಸುಳ್ಳು ದೂರು ನೀಡಿ ಯುವಕನ ಮಾನ ಹಾನಿಗೊಳಿಸಿ ಸಮಾಜದಲ್ಲಿ ಅಶಾಂತಿಗೆ ಕಾರಣಳಾದ ವಿದ್ಯಾರ್ಥಿನಿಯ ಮೇಲೆ ಈ ಕೂಡಲೇ ಕ್ರಮ ಕೈಗೊಂಡು ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ವಜಾಗೊಳಿಸುವಂತೆ ಆಗ್ರಹಿಸಿ ಕಾಲೇಜಿನ ವಿದ್ಯಾರ್ಥಿ ಸಂಘಟನೆ ಪ್ರಾಶುಂಪಾಲರಿಗೆ ಮತ್ತು ಪುತ್ತೂರು ನಗರ ಪೋಲಿಸ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಒಂದು ವೇಳೆ ಮನವಿ ತಿರಸ್ಕರಿಸಿ ವಿದ್ಯಾರ್ಥಿನಿಯನ್ನು ವಜಾಗೊಳಿಸದೆ ಇದ್ದರೆ ತೀವ್ರವಾಗಿ ಹೊರಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಜೊತೆಗೆ ಸುಳ್ಳು ಪ್ರಕರಣ ದಾಖಲಿಸಿದ ಸಂತ್ರಸ್ತ ವಿದ್ಯಾರ್ಥಿಯ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಲಾಗುತ್ತಿದೆ ಅವರ ವಿರುದ್ಧವು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.








