Friday, May 3, 2024
spot_imgspot_img
spot_imgspot_img

ಕಂಬಳ, ಜಲ್ಲಿಕಟ್ಟು ಕುರಿತು ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್..!!

- Advertisement -G L Acharya panikkar
- Advertisement -

ನವದೆಹಲಿ: ಜನಪ್ರಿಯ ಕ್ರೀಡೆಗಳಾದ ಕರ್ನಾಟಕದ ಕರಾವಳಿಯ ಕಂಬಳ, ತಮಿಳುನಾಡಿನ ಜಲ್ಲಿಕಟ್ಟು ಹಾಗು ಮಹಾರಾಷ್ಟ್ರ ಎತ್ತಿನ ಬಂದಿ ಓಟಕ್ಕೆ ಅನುಮತಿ ನೀಡುವ ಕಾನೂನನ್ನು ಸುಪ್ರೀಂ ಕೋರ್ಟ್ ಇಂದು ಎತ್ತಿ ಹಿಡಿದಿದೆ. ಇನ್ನುಮುಂದೆ ಕರ್ನಾಟಕದಲ್ಲಿ ಕರಾವಳಿ ಭಾಗದ ಜಾನಪದ ಕ್ರೀಡೆಯಾದ ಕಂಬಳವು ಯಾವುದೇ ಅಡೆ-ತಡೆಗಳಿಲ್ಲದೆ ನಡೆಯಲಿದೆ

ಇಂಥ ಕ್ರೀಡೆಗಳಲ್ಲಿ ಪ್ರಾಣಿಗಳನ್ನು ಹಿಂಸಿಸಲಾಗುತ್ತದೆ ಎಂದು ಪ್ರಶ್ನಿಸಿ ಸಲ್ಲಿಸಲಾಗಿದ್ದ ಎಲ್ಲ ಅರ್ಜಿಗಳನ್ನು ನ್ಯಾಯಪೀಠ ವಜಾಗೊಳಿಸುವ ಮೂಲಕ ಮಹತ್ವದ ತೀರ್ಪು ನೀಡಿದೆ.

ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ನೇತೃತ್ವದ ಐವರು ನ್ಯಾಯಾಧೀಶರನ್ನೊಳಗೊಂಡ ಪೀಠವು, ” ಶಾಸಕಾಂಗವು ಜಲ್ಲಿಕಟ್ಟು ಕ್ರೀಡೆಯನ್ನು ತಮಿಳುನಾಡು ರಾಜ್ಯದ ಸಾಂಸ್ಕೃತಿಕ ಮತ್ತು ಪರಂಪರೆಯ ಭಾಗವಾಗಿದೆ ಎಂದು ಘೋಷಿಸಿದೆ. ಹೀಗಿರುವಾಗ ನ್ಯಾಯಾಂಗವು ವಿಭಿನ್ನ ದೃಷ್ಟಿಕೋನವನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ’ ಎಂದು ಸ್ಪಷ್ಟವಾಗಿ ತಿಳಿಸಿತು.

ಪ್ರಾಣಿ ಕಲ್ಯಾಣ ಮಂಡಳಿ, ಪೆಟಾ), ಕ್ಯುಪಾ , ಫೆಡರೇಶನ್ ಆಫ್ ಇಂಡಿಯನ್ ಅನಿಮಲ್ ಪ್ರೊಟೆಕ್ಷನ್ ಆರ್ಗನೈಸೇಶನ್ಸ್ ಮತ್ತು ಅನಿಮಲ್ ಇಕ್ವಾಲಿಟಿ, ಯೂನಿಯನ್ ಆಫ್ ಇಂಡಿಯಾ ಮತ್ತು ತಮಿಳುನಾಡು ಸೇರಿದಂತೆ ರಾಜ್ಯ ವಿಧಾನಸಭೆ ಅಂಗೀಕರಿಸಿದ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದವು. ಈ ಕುರಿತು ವಿಚಾರಣೆ ನಡೆಸಿದ ನ್ಯಾ.ಕೆ.ಎಂ.ಜೋಸೆಫ್, ನ್ಯಾ.ಅಜಯ್ ರಸ್ತೋಗಿ, ನ್ಯಾ.ಅನಿರುದ್ಧ ಬೋಸ್, ನ್ಯಾ.ಹೃಷಿಕೇಶ್ ರಾಯ್ ಮತ್ತು ನ್ಯಾ. ಸಿಟಿ ರವಿಕುಮಾರ್ ಅವರನ್ನೊಳಗೊಂಡ ನ್ಯಾಯಮೂರ್ತಿಗಳ ಪೀಠವು ಈ ಮಹತ್ವದ ತೀರ್ಪು ಪ್ರಕಟಿಸಿದೆ. ಕಂಬಳ, ಜಲ್ಲಿಕಟ್ಟು ಮತ್ತು ಎತ್ತಿನ ಗಾಡಿ ಓಟಕ್ಕೆ ಅವಕಾಶ ನೀಡುವ ರಾಜ್ಯಗಳ ಕಾನೂನುಗಳ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಎಲ್ಲ ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ.

12 ವರ್ಷಗಳ ಬಳಿಕ ನ್ಯಾಯ

ಪೇಟಾ ಹೂಡಿರುವ ದಾವೆಯ ವಿರುದ್ಧ ಕಂಬಳದ ಪರವಾಗಿ ಉಪ್ಪಿನಂಗಡಿ ವಿಜಯ ವಿಕ್ರಮ ಜೋಡುಕರೆ ಕಂಬಲ ಸಮಿತಿ ಅಧ್ಯಕ್ಷರಾದ, ಪ್ರಸ್ತುತ ಪುತ್ತೂರು ಶಾಸಕರಾಗಿರುವ ಅಶೋಕ್‌ ಕುಮಾರ್ ರೈಯವರು ಪೇಟಾ ವಿರುದ್ಧ ನ್ಯಾಯಾಲಯದಲ್ಲಿ ದಾವೆಯನ್ನು ಹೂಡಿ ಕಂಬಳ ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾಗಿದ್ದು ಇದರಲ್ಲಿ ಯಾವುದೇ ರೀತಿಯ ಪ್ರಾಣಿ ಹಿಂಸೆಯಾಗುತ್ತಿಲ್ಲ. ಕಂಬಳದ ಬಗ್ಗೆ ಪೇಟಾ ಮಾಡಿರುವ ಆರೋಪಗಳು ನ್ಯಾಯಬದ್ಧತೆಯಿಂದ ಕೂಡಿಲ್ಲ ಎಂದು ಕಂಬಳ ಪರ ವಕೀಲರು ನ್ಯಾಯಾಲಯದಲ್ಲಿ ವಾದಮಂಡಿಸುವ ಮೂಲಕ ಕಂಬಳದಲ್ಲಿ ಪ್ರಾಣಿ ಹಿಂಸೆಯಿಲ್ಲ ಎಂಬುದನ್ನು ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಕಂಬಳ ಸಮಿತಿ ಅಧ್ಯಕ್ಷದ ಅಶೋಕ್ ರೈಯವರ ಏಕಾಂಗಿ ಹೋರಾಟಕ್ಕೆ ಜಯ ದೊರಕಿದ್ದು ಕಂಬಳ ಪರವಾಗಿ ದೇಶದ ಸರ್ವೋಚ್ಚ ನ್ಯಾಯಾಲಯ ತೀರ್ಪು ನೀಡಿದೆ. ಮುಂದಿನ ದಿನಗಳಲ್ಲಿ ಕಂಬಳ ಯಾವುದೇ ಅಡ್ಡಿ ಆತಂಕಗಳಿಲ್ಲದೆ ನಡೆಸಬಹುದಾಗಿದೆ.

- Advertisement -

Related news

error: Content is protected !!