Sunday, June 14, 2026
spot_imgspot_img
spot_imgspot_img

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಗ್ರಾಮ ಲೆಕ್ಕಾಧಿಕಾರಿ..!

- Advertisement -
- Advertisement -

ಗ್ರಾಮ ಲೆಕ್ಕಾಧಿಕಾರಿಯೋರ್ವ ನಿರ್ಜನ ಪ್ರದೇಶದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಚಿತ್ರದುರ್ಗ ಹೊರವಲಯದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಚಳ್ಳಕೆರೆ ತಾಲೂಕಿನ ದುರ್ಗಾವರ ಗ್ರಾಮ ಲೆಕ್ಕಾಧಿಕಾರಿ ನಾಗರಾಜ್ ಎಂದು ಗುರುತಿಸಲಾಗಿದೆ.

ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ,ನಾಗರಾಜ ಕಳೆದ ಒಂದು ವಾರದ ಹಿಂದೆ ನೇಣಿಗೆ ಶರಣಾಗಿದ್ದು, ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಹಿರಿಯೂರು ರಸ್ತೆಯ ಸರ್ವೀಸ್ ರಸ್ತೆಯಲ್ಲಿರುವ ಉಪಾಧ್ಯೆ ಹೋಟೆಲ್ ಹಿಂಭಾಗದ ಕಣಿವೆ ಪ್ರದೇಶದಲ್ಲಿ ಈ ಘಟನೆ ನಡೆದಿದೆ.ಶವದ ಮರಣೋತ್ತರ ಪರೀಕ್ಷೆ ಬಳಿಕ ನಾಗರಾಜ್ ಕುಟುಂಬಸ್ಥರಿಗೆ ಶವ ಹಸ್ತಾಂತರಿಸಲಾಗಿದೆ. ಮೇಲಾಧಿಕಾರಿಗಳ ಕಿರುಕುಳ ಆರೋಪಕ್ಕೆ ಸಾವಿಗೆ ಶರಣಾಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

- Advertisement -

Related news

error: Content is protected !!