Tuesday, May 7, 2024
spot_imgspot_img
spot_imgspot_img

ಕೈ- ಕತ್ತು ಕೊಯ್ದುಕೊಂಡು ಯುವಕ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!

- Advertisement -G L Acharya panikkar
- Advertisement -

ಕೈ ಹಾಗೂ ಕತ್ತುಕೊಯ್ದು ಕೊಂಡು ನೇಣು ಬಿಗಿದಿರುವ ಸ್ಥಿತಿಯಲ್ಲಿ ಯುವಕನ ಮೃತದೇಹವು ಪತ್ತೆಯಾದ ಘಟನೆ ಮಂಡ್ಯದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ವಿನಯ್ ಕುಮಾರ್ (24) ಎಂದು ಗುರುತಿಸಲಾಗಿದೆ.

ವಿನಯ್‌ ಸರ್ಜಾಪುರ ಸಮೀಪದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಮೊದಲಿಗೆ ಕತ್ತರಿಯಲ್ಲಿ ಕೈ ಮತ್ತು ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ತದನಂತರ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇದು ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ. ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದ ಥಳಿರಸ್ತೆಯಲ್ಲಿ ಘಟನೆ ನಡೆದಿದೆ.

ಆತ್ಮಹತ್ಯೆಗೂ ಮುನ್ನ ಮೊಬೈಲ್ ಸಿಮ್ ತೆಗೆದು ಬಿಸಾಡಿದ್ದಾನೆ. ಮೊಬೈಲ್ ಪೂರ್ತಿ ರೀಸ್ಟಾರ್ಟ್ ಮಾಡಿದ್ದಾನೆ. ಯಾವುದೋ ಬಲವಾದ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ಇದೆ. ವಿನಯ್‌ಗೆ ಹೆದರಿಸಿ ಯಾರಾದರೂ ಬ್ಲ್ಯಾಕ್‌ ಮೇಲ್ ಮಾಡಿದ್ದರಾ? ಇದರಿಂದ ಭಯಪಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಪ್ರಶ್ನೆ ಉದ್ಭವಿಸಿದೆ. ಸದ್ಯ ಆನೇಕಲ್ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆನೇಕಲ್ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ಮೃತದೇಹವನ್ನು ರವಾನೆ ಮಾಡಿದ್ದಾರೆ. ಜತೆಗೆ ಯುವಕನ ಮೊಬೈಲ್ ವಶಕ್ಕೆ ಪಡೆದು ತನಿಖೆಯನ್ನು ಮುಂದುವರಿಸಿದ್ದಾರೆ.

- Advertisement -

Related news

error: Content is protected !!