Sunday, June 21, 2026
spot_imgspot_img
spot_imgspot_img

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಶಾಫಿ ಬೆಳ್ಳಾರೆಗೆ ಮುತ್ತು ಕೊಟ್ಟ ಯುವಕ

- Advertisement -
- Advertisement -

ಕೋರ್ಟ್​ ಆವರಣದಲ್ಲಿ ಪೊಲೀಸರ ಭದ್ರತೆ ನಡುವೆ ಆರೋಪಿ ಶಾಫಿ ಬೆಳ್ಳಾರೆ ಹಣೆಗೆ ಮುತ್ತು

ಮಂಗಳೂರು: ಪೊಲೀಸ್ ಭದ್ರತೆ ನಡೆವೆಯೇ ಯುವಕನೋರ್ವ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟರು ಕೊಲೆ ಪ್ರಕರಣದ ಆರೋಪಿಗೆ ಮುತ್ತಿಕ್ಕಿರುವ ಘಟನೆ ನಡೆದಿದೆ.

2022ರ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಸುಮಾರು 20ಕ್ಕೂ ಆರೋಪಿಗಳನ್ನು ಎನ್‌ಐಎ ತಂಡ ಬಂಧಿಸಿದೆ. ಇನ್ನು ಈ ಕೇಸ್‌ನ ಮಾಸ್ಟರ್‌ ಮೈಂಡ್‌ ಎಸ್‌ಡಿಪಿಐ ಮುಖಂಡ ಇಸ್ಮಾಯಿಲ್‌ ಶಾಫಿ ಬೆಳ್ಳಾರೆ ನ್ಯಾಯಾಂಗ ಬಂಧನದಲ್ಲಿದ್ದಾನೆ.

2017ರಲ್ಲಿ ಆರ್.ಎಸ್.ಎಸ್ ಹಾಗೂ ಕಲ್ಲಡ್ಕ ಭಟ್ ವಿರುದ್ಧ ಅವಹೇನಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಟಿ ವಾರೆಂಟ್​ ಮೇಲೆ ಪೊಲೀಸರು ಶಾಫಿ ಬೆಳ್ಳಾರೆಯನ್ನ ಕರೆದುಕೊಂಡು ಬಂದು ಬೆಳ್ತಂಗಡಿ ಕೋರ್ಟ್​ಗೆ ಹಾಜರುಪಡಿಸಿದರು. ಈ ವೇಳೆ ಶಾಫಿ ಬೆಳ್ಳಾರೆಗೆ ಯುವಕನೋರ್ವ ಮುತ್ತಿಟ್ಟಿದ್ದಾನೆ.

- Advertisement -

Related news

error: Content is protected !!