Thursday, May 2, 2024
spot_imgspot_img
spot_imgspot_img

ಬಾವಿಗೆ ಹಾರಿ ಯುವತಿ ಆತ್ಮಹತ್ಯೆಗೆ ಶರಣು..!

- Advertisement -G L Acharya panikkar
- Advertisement -

ಬಾವಿಗೆ ಹಾರಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳದ ಬೆಳಕೆಯ ಕಟಗೇರಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ದೀಕ್ಷಾ ನಾಯ್ಕ (22) ಎಂದು ಗುರುತಿಸಲಾಗಿದೆ.

ದೀಕ್ಷಾ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಳು. ಎಂದಿನಂತೆ ಬೆಳಗ್ಗೆ ಕಾಲೇಜಿ ಹೋಗಿ ಮನೆಗೆ ಬಂದಿದ್ದಳು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಗಳು ಕಾಣದಿದ್ದಾಗ ಪೋಷಕರು ಹುಡುಕಾಟ ನಡೆಸಿದ್ದಾರೆ. ಕಡೆಗೆ ಅನುಮಾನಗೊಂಡು ಬಾವಿಯಲ್ಲಿ ನೋಡಿದಾಗ ಮೃತದೇಹವು ಪತ್ತೆಯಾಗಿದೆ.

ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀರಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

- Advertisement -

Related news

error: Content is protected !!