Sunday, June 29, 2025
spot_imgspot_img
spot_imgspot_img

ಕಾರಿನ ಗಾಜು ಒಡೆದು ಕಳ್ಳತನ; ನಾಲ್ವರ ಬಂಧನ..!

- Advertisement -
- Advertisement -

ಬೆಂಗಳೂರು: ಹಾಡಹಗಲೇ ಕಾರಿನ ಗಾಜು ಒಡೆದು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳರ ಗ್ಯಾಂಗ್‌ವೊಂದಕ್ಕೆ ಪೊಲೀಸರು ಬಂಧಿಸಿದ್ದಾರೆ.

ರಸ್ತೆ ಬದಿ ಪಾರ್ಕ್ ಮಾಡಿ ಶಾಪಿಂಗ್, ಬ್ಯಾಂಕ್ ಕೆಲಸಕ್ಕೆಂದು ಹೋಗುವವರನ್ನು ಈ ಖತರ್ನಾಕ್ ಕಳ್ಳರ ಗ್ಯಾಂಗ್ ಟಾರ್ಗೆಟ್ ಮಾಡುತ್ತಿತ್ತು. ಪಾರ್ಕಿಂಗ್ ಮಾಡಿ ನಿಲ್ಲಿಸುತ್ತಿದ್ದ ಕಾರಿನ ಗಾಜು ಒಡೆದು ಕಾರಿನಲ್ಲಿದ್ದ ಲ್ಯಾಪ್‌ಟಾಪ್, ಬ್ಯಾಗ್ ಹಾಗೂ ಬೆಲೆಬಾಳುವ ವಸ್ತುಗಳನ್ನು ಎತ್ತೊಯ್ಯುತ್ತಿತ್ತು.

ಗುರುವಾರ ಇದೇ ಕಳ್ಳರ ಗ್ಯಾಂಗ್ ಇಂದಿರಾನಗರದಲ್ಲಿ ನಿಲ್ಲಿಸಿದ್ದ ಕಾರಿನ ಗಾಜು ಒಡೆದು ಕಾರಿನಲ್ಲಿದ್ದ ಬ್ಯಾಗ್ ಕಳ್ಳತನ ಮಾಡಿತ್ತು. ಖದೀಮರು ಕಳ್ಳತನ ಮಾಡುತ್ತಿರುವ ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಸಿಸಿಟಿವಿ ದೃಶ್ಯಾವಳಿ ಆಧರಿಸಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಘಟನೆಯ ಬಗ್ಗೆ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!