Monday, June 8, 2026
spot_imgspot_img
spot_imgspot_img

ಉಡುಪಿ: ಹಾಡಹಗಲೇ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗ, ನಗದು ಕಳವುಗೈದ ಕಳ್ಳರು

- Advertisement -
- Advertisement -

ಉಡುಪಿ : ಹಾಡಹಗಲೇ ಜನವಸತಿ ಪ್ರದೇಶದ ಮನೆಯೊಂದಕ್ಕೆ ಕಳ್ಳರು ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಘಟನೆ ಕುಂದಾಪುರದ ಹಂಗಳೂರು ಸಮೀಪ ಬ್ರಹ್ಮಗುಡಿ ರಸ್ತೆಯಲ್ಲಿ ನಡೆದಿದೆ.

ಜಗದೀಶ್ ಚಂದ್ರ ನಾಯರ್ ಎಂಬವರ ಮನೆಯ ಬಾಗಿಲನ್ನೇ ಒಡೆದು ಹಾಕಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ನಗದು ದೋಚಿ ಪರಾರಿಯಾಗಿದ್ದಾರೆ.

ಮಧ್ಯಾಹ್ನ 2 ಗಂಟೆ ಸುಮಾರಿಗೆ ಜಗದೀಶ್ ಚಂದ್ರ ಹಾಗೂ ಪತ್ನಿ ಮನೆಯಲ್ಲಿ ಊಟ ಮಾಡಿ ಪ್ರೆಸ್ ಗೆ ಹೋಗಿದ್ದರು. ಸಂಜೆ 4 ಗಂಟೆ ಸುಮಾರಿಗೆ ಜಗದೀಶ್ ಅವರ ಪತ್ನಿ ಮಗಳನ್ನು ಶಾಲೆಯಿಂದ ಕರೆದುಕೊಂಡು ಮನೆಗೆ ಬಂದಾಗ ಅನುಮಾನ ಬಂದು ಹಿಂಬದಿ ಹೋಗಿ ನೋಡಿದಾಗ ಮನೆಯ ಹಿಂಬಾಗಿಲು ಒಡೆದು ನಗ ನಗದು ಲೂಟಿ ಮಾಡಿದ ವಿಚಾರ ಬೆಳಕಿಗೆ ಬಂದಿದೆ.

ಕುಂದಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

- Advertisement -

Related news

error: Content is protected !!