Sunday, June 14, 2026
spot_imgspot_img
spot_imgspot_img

ಉಡುಪಿ : ಸ್ಕೂಟರ್ ಮೇಲೆ ಮಲಗಿದ್ದವನ ರಸ್ತೆ ಬದಿ ಮಲಗಿಸಿ ಸ್ಕೂಟರ್‌, ಮೊಬೈಲ್‌ ಸಹಿತ ಸೊತ್ತುಗಳು ದೋಚಿದ ಕಳ್ಳರು

- Advertisement -
- Advertisement -

ಉಡುಪಿ : ರಸ್ತೆ ಬದಿಯಲ್ಲಿ ಸ್ಕೂಟರ್‌ ನಿಲ್ಲಿಸಿ ಸ್ಕೂಟರ್‌ಗೆ ತಲೆ ಇಟ್ಟು ಮಲಗಿ ನಿದ್ರಿಸಿದ್ದ ಯುವಕನಿಗೆ ಗೊತ್ತಾಗದಂತೆ ಸ್ಕೂಟರ್‌ ಸಹಿತ ಬೆಲೆ ಬಾಳುವ ಸೊತ್ತುಗಳನ್ನು ಕಳ್ಳರು ಕದ್ದೊಯ್ದ ಘಟನೆ ಭಾನುವಾರ ತಡರಾತ್ರಿ ಕಾಪು ಕೊಪ್ಪಲಂಗಡಿಯಲ್ಲಿ ನಡೆದಿದೆ.

ಕಾರ್ಕಳ ಮುಡಾರು ಗ್ರಾಮದ ಚೇತನ್‌ ವಂಚನೆಗೊಳಗಾದವರು.

ಸ್ಕೂಟರ್‌ನಲ್ಲಿ ಸುರತ್ಕಲ್‌ನತ್ತ ತೆರಳುತ್ತಿದ್ದ ಚೇತನ್ ಸ್ಕೂಟರ್ ಸವಾರಿ ಮಾಡಲು ಕಷ್ಟವಾಗಿದ್ದುದರಿಂದ ತನ್ನ ಸ್ಕೂಟರನ್ನು ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿ ಸ್ಕೂಟರಿನಲ್ಲಿ ತಲೆ ಇಟ್ಟು ಮಲಗಿದ್ದರು. ಮುಂಜಾನೆ 2.30ರ ವೇಳೆಗೆ ಎಚ್ಚರವಾದಾಗ ಚೇತನ್ ಹೆಲ್ಮೆಟ್ ಸಹಿತ ರಸ್ತೆ ಬದಿ ಮಲಗಿದ್ದು ಅವರ ಸ್ಕೂಟರ್, ಮೊಬೈಲ್, ಪರ್ಸ್ ಇಲ್ಲದೇ ಇದ್ದು ಯಾರೋ ಕಳ್ಳರು ಅಪಹರಿಸಿರುವುದು ಗೊತ್ತಾಗಿದೆ. ಕಳವಾಗಿರುವ ಪರ್ಸ್‌ನಲ್ಲಿ ಅಗತ್ಯ ದಾಖಲೆಗಳು ಇದ್ದವು. ಈ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

- Advertisement -

Related news

error: Content is protected !!