Thursday, June 18, 2026
spot_imgspot_img
spot_imgspot_img

‘ಕೆಲಸದ ಒತ್ತಡದಿಂದ ಕೆಲವೊಮ್ಮೆ ಹೀಗಾಗುತ್ತದೆ’ – ಚಿಕಿತ್ಸೆ ಬಳಿಕ ಹೆಚ್‌ಡಿಕೆ ಹೇಳಿಕೆ

- Advertisement -
- Advertisement -

ಕೆಲಸದ ಒತ್ತಡದಿಂದ ಒಮ್ಮೊಮ್ಮೆ ಮೂಗಿನಲ್ಲಿ ರಕ್ತಸ್ರಾವ ಆಗುತ್ತದೆ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಮೂಗಿನಲ್ಲಿ ರಕ್ತಸ್ರಾವದಿಂದ ಜಯನಗರದ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಇದೀಗ ಡಿಸ್ಜಾರ್ಜ್ ಆಗಿದ್ದಾರೆ. ಸುಮಾರು 4 ಗಂಟೆ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಳಿಕ ಮಾಧ್ಯಮದವರೊಂದಿಗೆಮಾತನಾಡಿದ ಅವರು, ವಿಶ್ರಾಂತಿ ಪಡೆಯುವುದು ಸೂಕ್ತ ಎಂದು ವೈದ್ಯರು ಸಲಹೆ ನೀಡಿದ್ದಾರೆ. ಒಮ್ಮೊಮ್ಮೆ ಹೀಗಾಗುತ್ತೆ. ಯಾರೂ ಆತಂಕಪಡುವ ಅಗತ್ಯವಿಲ್ಲ, ಭಗವಂತನ ಆಶೀರ್ವಾದವಿದೆ ಎಂದು ಹೇಳಿದ್ದಾರೆ.

ಮೂರು ಬಾರಿ ಹೃದಯದ ವಾಲ್ ಬದಲಾವಣೆ ಆಗಿದೆ. ಇದಕ್ಕಾಗಿ ಮಾತ್ರೆಗಳನ್ನು ತೆಗೆದುಕೊಳ್ಳುತ್ತಿದ್ದೆ. ಒತ್ತಡ, ವಿಶ್ರಾಂತಿ ಪಡೆಯದೆ ಕೆಲಸ ಮಾಡಿದ್ದರಿಂದ ಈ ರೀತಿ ಆಗಿದೆ.

ಹೆಚ್.ಡಿ. ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾದ ಸುದ್ದಿ ಮಾಧ್ಯಮಗಳಲ್ಲಿ ನೋಡಿದೆ. ಚಿಕಿತ್ಸೆ ಪಡೆಯುತ್ತಿರುವ ಕುಮಾರಸ್ವಾಮಿ ಅವರು ಶೀಘ್ರ ಚೇತರಿಸಿಕೊಂಡು ಮತ್ತೆ ತಮ್ಮ ಕರ್ತವ್ಯದಲ್ಲಿ ತೊಡಗಿಸಿಕೊಳ್ಳುವಂತಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

ಕುಮಾರಸ್ವಾಮಿ ಭೇಟಿ ಬಳಿಕ ಬಿವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದು, ಕುಮಾರಸ್ವಾಮಿ ಅವರು ಆರಾಮಾಗಿದ್ದಾರೆ. ಕೆಲಸದ ಒತ್ತಡವಿತ್ತು. ಹಾಗಾಗಿ ಅವರಿಗೆ ಸ್ವಲ್ಪ ಆಯಾಸವಾಗಿದೆ. ಯಾರು ಗಾಬರಿ ಪಡುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ.

- Advertisement -

Related news

error: Content is protected !!