Sunday, June 14, 2026
spot_imgspot_img
spot_imgspot_img

ಕೆಲಸದಿಂದ ವಜಾಗೊಳಿಸಿದ್ದಕ್ಕೆ ಬಾಂಬ್ ಇದೆ ಎಂದು ಬೆದರಿಕೆ ಹಾಕಿದ ಯುವತಿ

- Advertisement -
- Advertisement -

ಕೆಲಸದಿಂದ ವಜಾಗೊಳಿಸಿದ್ದಕ್ಕೆ ಕೋಪಗೊಂಡ ಯುವತಿಯೊಬ್ಬಳು ಬೆಂಗಳೂರಿನ ಟಾಟಾ ಕನ್ಸ್‌ಲ್ಟೆನ್ಸಿ ಸರ್ವಿಸ್‌ (ಟಿಸಿಎಸ್‌) ಕಂಪನಿಗೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದಾಳೆ.

ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಟಿಸಿಎಸ್ ಕಂಪನಿಗೆ ಕರೆ ಬಂದ ಕೂಡಲೇ, ಉದ್ಯೋಗಿಗಳು ಕಂಪನಿಯಿಂದ ಹೊರಬಂದಿದ್ದಾರೆ. ಈ ಬಗ್ಗೆ ಕಂಪನಿಯ ಆಡಳಿತ ಮಂಡಳಿ ಪರಪ್ಪನ ಅಗ್ರಹಾರ ಪೊಲೀಸರಿಗೆ ಮಾಹಿತಿ ನೀಡಿದ್ದು, ಟಿಸಿಎಸ್​ ಕಂಪನಿಯ ಬಿ ಬ್ಲಾಕ್‌ನಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಬಂದಿದೆ. ಪರಪ್ಪನ ಅಗ್ರಹಾರ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯದಳ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದಾಗ ಇದೊಂದು ಹುಸಿ ಬಾಂಬ್​ ಕರೆ ಎಂದು ಖಚಿತವಾಗಿದೆ.
ಹುಸಿಬಾಂಬ್ ಕರೆ ಮಾಡಿದ್ದು, ಟಿವಿಎಸ್‌ ಮಾಜಿ ಉದ್ಯೋಗಿಯಾಗಿದ್ದು, ಈಕೆ ಮೂಲತಃ ಬೆಳಗಾವಿಯವರು ಎಂದು ತಿಳಿದುಬಂದಿದೆ.

ಯುವತಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಗ ಕ್ಯಾಬ್ ಚಾಲಕನನ್ನು ಪರಿಚಯ ಮಾಡಿಕೊಂಡಿದ್ದರು. ಪರಿಚಿತ ಕ್ಯಾಬ್ ಚಾಲಕನಿಗೆ ಕುಡಿದ ಮತ್ತಿನಲ್ಲಿ ಯುವತಿ ಕರೆ ಮಾಡಿ ಕಂಪನಿಯ ಬಿ ಬ್ಲಾಕ್​ನಲ್ಲಿ ಬಾಂಬ್ ಇದೆ ಎಂದು ಹೇಳಿದ್ದರು ಎನ್ನಲಾಗಿದೆ

- Advertisement -

Related news

error: Content is protected !!