Tuesday, July 21, 2026
spot_imgspot_img
spot_imgspot_img

ಪುತ್ತೂರು: ಪಿಸ್ತೂಲ್ ತೋರಿಸಿ ಬೆದರಿಕೆ – ಯುವಕ ಬಂಧನ

- Advertisement -
- Advertisement -

ಪುತ್ತೂರು: ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ಪಿಸ್ತೂಲ್ ತೋರಿಸಿ ಗುಂಡು ಹೊಡೆಯಲು ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.ಪ್ರಕರಣದ ದೂರುದಾರರಾದ ಪುತ್ತೂರು ಕೆಮ್ಮಿಂಜೆ ನಿವಾಸಿ ಅಬ್ದುಲ್ ಹಕೀಂ (42) ಅವರು ದಿನಾಂಕ 02-03-2026 ರಂದು ಮಧ್ಯಾಹ್ನ ಪುತ್ತೂರಿನಿಂದ ಕೂರ್ನಡ್ಕಕ್ಕೆ ತಮ್ಮ ಕಾರಿನಲ್ಲಿ ತೆರಳುತ್ತಿದ್ದ ವೇಳೆ, ಪುತ್ತೂರು ರಿಲ್ಯಾನ್ಸ್ ಮಾಲ್ ಬಳಿ ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೆ ಬಂದ ಸುಮಾರು 30 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬ ಪಿಸ್ತೂಲ್ ತೋರಿಸಿ ಗುಂಡು ಹೊಡೆಯಲು ಯತ್ನಿಸಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ಈ ಸಂದರ್ಭದಲ್ಲಿ ದೂರುದಾರರು ಹಾಗೂ ಸಾರ್ವಜನಿಕರು ಸೇರಿ ಆರೋಪಿಯನ್ನು ಹಿಡಿಯಲು ಯತ್ನಿಸಿದಾಗ, ಆತನು ಮೋಟಾರ್ ಸೈಕಲ್ ಸಹಿತ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 26/2026ರಂತೆ ಪ್ರಕರಣ ದಾಖಲಿಸಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ 2023ರ ಕಲಂ 351(3) ಹಾಗೂ ಶಸ್ತ್ರಾಸ್ತ್ರ ಕಾಯ್ದೆ 1959ರ ಕಲಂ 3, 25, 27ರಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ತನಿಖೆಯ ಫಲವಾಗಿ ಆರೋಪಿತನಾದ ಪುತ್ತೂರು ನಿವಾಸಿ ಮಹಮ್ಮದ್ ಶಫಿಕ್ (19) ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಬಳಿಕ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

- Advertisement -

Related news

error: Content is protected !!