Monday, July 27, 2026
spot_imgspot_img
spot_imgspot_img

ಕಣಿವೆ ರಾಜ್ಯದಲ್ಲಿ ಗುಂಡಿನ ಮೊರೆತ- ಮೂವರು ಬಿಜೆಪಿ ಕಾರ್ಯಕರ್ತರ ಹತ್ಯೆ.

- Advertisement -
- Advertisement -

ಕಾಶ್ಮೀರ: ಕುಲ್ಗಾಮ್ ನ ಗ್ರಾಮವೊಂದರಲ್ಲಿ ಮೂವರು ಬಿಜೆಪಿ ಕಾರ್ಯಕರ್ತರನ್ನು ಉಗ್ರರು ಹತ್ಯೆ ಮಾಡಿದ್ದಾರೆ ಎಂದು ಸ್ಥಳೀಯ ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.


ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಪೊರಾ ಗ್ರಾಮದಲ್ಲಿ ನಿನ್ನೆ ರಾತ್ರಿ 8.20ರ ಸುಮಾರಿಗೆ ಉಗ್ರರು ಈ ಕೃತ್ಯ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


ಭಯೋತ್ಪಾದಕ ಕೃತ್ಯದ ಬಗ್ಗೆ ಮಾಹಿತಿ ಪಡೆದ ಕುಲ್ಗಾಮ್ ಪೊಲೀಸರು ತೆರಳುವಷ್ಟರಲ್ಲೇ ಉಗ್ರರು ಮೂವರು ಬಿಜೆಪಿ ಕಾರ್ಯಕರ್ತರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಕುಲಗಾಮ್​ನ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಫಿದಾ ಹುಸೇನ್ ಹಾಗೂ ಬಿಜೆಪಿಯ ಮತ್ತೊಬ್ಬ ಕಾರ್ಯಕರ್ತ ಉಮರ್ ಹಜಮ್ ಮತ್ತು ಒಬ್ಬ ನಾಗರಿಕ ಹತ್ಯೆಯಾದವರು ಎಂದು ಹೇಳಲಾಗಿದೆ.


ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇತ್ತೀಚೆಗೆ ಕಾಶ್ಮೀರ ಕಣಿವೆಯಲ್ಲಿ ಬಿಜೆಪಿಯ ಅನೇಕ ಮುಖಂಡರು ಮತ್ತು ಕಾರ್ಯಕರ್ತರನ್ನು ಕೊಲ್ಲಲಾಗಿದೆ. ಜುಲೈ ತಿಂಗಳಲ್ಲಿ ಕಾಶ್ಮೀರದ ಬಿಜೆಪಿ ಮುಖಂಡ ಶೇಖ್ ವಾಸಿಂ ಬಾರಿ ಮತ್ತವರ ಕುಟುಂಬದ ಇಬ್ಬರು ಸದಸ್ಯರನ್ನು ಉಗ್ರರು ಬಲಿಪಡೆದಿದ್ದರು. ಬಂಡೀಪೂರಾ ಜಿಲ್ಲೆಯ ಬಿಜೆಪಿ ಅಧ್ಯಕ್ಷರಾಗಿದ್ದ ವಾಸೀಂ ಬಾರಿ ಅವರನ್ನು ಉಗ್ರರು ಗುಂಡಿಟ್ಟು ಹತ್ಯೆಗೈದಿದ್ದರು.

- Advertisement -

Related news

error: Content is protected !!