Monday, July 20, 2026
spot_imgspot_img
spot_imgspot_img

ಯಾದಗಿರಿ: ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಪೋಟ್‌ ಡೆತ್

- Advertisement -
- Advertisement -

ಯಾದಗಿರಿ/ಜಡಚರ್ಲಾ: ದೇವರ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಕ್ರೂಸರ್ ವಾಹನ ರಸ್ತೆ ಬದಿಯ ತಡೆಗೋಡೆಗೆ ಗುದ್ದಿದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಆಂಧ್ರಪ್ರದೇಶದ ಜಡಚರ್ಲಾ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ಮೃತರನ್ನು ಯಾದಗಿರಿ ಜಿಲ್ಲೆಯ ಶಾಹಪುರ ತಾಲೂಕಿನ ಗೋಗಿ ಗ್ರಾಮದ ನಿವಾಸಿಗಳಾದ ರಾಮರೆಡ್ಡಿ (52), ಅವರ ಪತ್ನಿ ಮೇಘಾ (50) ಹಾಗೂ ರಾಮರೆಡ್ಡಿಯ ಅತ್ತೆ, ವಿಜಯಪುರ ಜಿಲ್ಲೆ ಮೂಲದ ಮಹಾದೇವಪ್ಪ (65) ಎಂದು ಗುರುತಿಸಲಾಗಿದೆ.

ಮೃತ ರಾಮರೆಡ್ಡಿ ಕುಟುಂಬಸ್ಥರು ಹಾಗೂ ಸಂಬಂಧಿಕರೊಂದಿಗೆ ಕ್ರೂಸರ್ ವಾಹನದಲ್ಲಿ ಯಾದಗಿರಿಯಿಂದ ಶ್ರೀಶೈಲ ಮಲ್ಲಿಕಾರ್ಜುನ ದೇವಾಲಯ ದರ್ಶನಕ್ಕೆ ತೆರಳುತ್ತಿದ್ದರು. ನಿನ್ನೆ ಯಾದಗಿರಿ ನಗರದಲ್ಲಿ ಮೊಮ್ಮಗನ ಜವಳ ಕಾರ್ಯಕ್ರಮ ಮುಗಿಸಿಕೊಂಡು ಶ್ರೀಶೈಲಕ್ಕೆ ಪ್ರಯಾಣಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಚಾಲಕ ನಿದ್ದೆ ಮಂಪರಿನಲ್ಲಿ ಇದ್ದ ಕಾರಣಕ್ಕೆ ಅಪಘಾತ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ಗಾಯಗೊಂಡ ಐವರು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!