- Advertisement -
- Advertisement -


ಒಂದೇ ಕುಟುಂಬದ ಮೂವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ತುಮಕೂರಿನ ಪಂಡಿತನಹಳ್ಳಿ ರೈಲ್ವೆ ಹಳಿ ಬಳಿ ನಡೆದಿದೆ.
ಮೃತರನ್ನು ಒಂದೇ ಕುಟುಂಬದ ಸಿದ್ದಗಂಗಯ್ಯ(62), ಸುನಂದಮ್ಮ, ಗೀತಾ ಎಂದು ಗುರುತಿಸಲಾಗಿದೆ.
ಕೆಇಬಿಯಲ್ಲಿ ನೌಕರನಾಗಿದ್ದ ಸಿದ್ದಗಂಗಯ್ಯ ನಿವೃತ್ತಿ ಬಳಿಕ ಬೆಂಗಳೂರಿನ ಮಲ್ಲೇಶ್ವರಂನ ಕೆ ಸಿ ಜನರಲ್ ಆಸ್ಪತ್ರೆ ಬಳಿ ಟೀ ಅಂಗಡಿ ನಡೆಸುತ್ತಿದ್ದರು. ಇಂದು ಬೆಳಗಿನ ಜಾವ ಕುಟುಂಬ ಸಮೇತ ಬೆಂಗಳೂರಿನಿಂದ ತುಮಕೂರಿಗೆ ಬಂದ ಸಿದ್ದಗಂಗಯ್ಯ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ರೈಲು ಗುದ್ದಿದ ರಭಸಕ್ಕೆ ಮೂವರ ದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.
ಮೃತದೇಹವನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದ್ದು , ಸಾಲಬಾಧೆಯೇ ಆತ್ಮಹತ್ಯೆಗೆ ಕಾರಣ ಎಂದು ಶಂಕಿಸಲಾಗಿದೆ. ಯಶವಂತಪುರ ರೈಲ್ವೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -








