Friday, July 24, 2026
spot_imgspot_img
spot_imgspot_img

ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಮೂವರು ನಕ್ಸಲೀಯರು ಬಲಿ

- Advertisement -
- Advertisement -

ಛತ್ತೀಸ್‌ಗಢ: ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರು ಮೃತಪಟ್ಟ ಘಟನೆ ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಇಂದು ಭಾನುವಾರ ಬೆಳಗ್ಗೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬೆಜ್ಜಿ ಮತ್ತು ಚಿಂತಗುಫಾ ಪೊಲೀಸ್ ಠಾಣೆ ಪ್ರದೇಶಗಳ ನಡುವಿನ ಅರಣ್ಯ ಬೆಟ್ಟಗಳಲ್ಲಿ ಬೆಳಗ್ಗೆ ಭದ್ರತಾ ಪಡೆ ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಪ್ರದೇಶದಲ್ಲಿ ಮಾವೋವಾದಿಗಳು ಇರುವಿಕೆಯ ಬಗ್ಗೆ ದೊರೆತ ಮಾಹಿತಿ ಮೇರೆಗೆ ಜಿಲ್ಲಾ ಮೀಸಲು ಪಡೆ ತಂಡವು ನಕ್ಸಲೀಯ ವಿರೋಧಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಇಲ್ಲಿಯವರೆಗೆ, ಮೂವರು ನಕ್ಸಲೀಯರು ಮೃತಪಟ್ಟಿದ್ದು, ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವಾಣ್ ತಿಳಿಸಿದ್ದಾರೆ.

ಈ ವರ್ಷ ಛತ್ತೀಸ್‌ಗಢದಲ್ಲಿ 262 ನಕ್ಸಲರನ್ನು ಎನ್‌ಕೌಂಟರ್ ಮಾಡಲಾಗಿದೆ. ಅವರಲ್ಲಿ, ಸುಕ್ಮಾ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡಿರುವ ಬಸ್ತಾರ್ ವಿಭಾಗದಲ್ಲಿ 233 ಜನರು ಸಾವನ್ನಪ್ಪಿದ್ದಾರೆ. ರಾಯ್‌ಪುರ ವಿಭಾಗದ ಗರಿಯಾಬಂದ್ ಜಿಲ್ಲೆಯಲ್ಲಿ 27 ಜನರು ಮೃತಪಟ್ಟಿದ್ದಾರೆ.

- Advertisement -

Related news

error: Content is protected !!