Sunday, August 2, 2026
spot_imgspot_img
spot_imgspot_img

ಕಾವೂರು ಜಂಕ್ಷನ್‌ ಬಳಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಮೂವರ ಬಂಧನ..!

- Advertisement -
- Advertisement -

ಮಂಗಳೂರು: ಕಾವೂರು ಜಂಕ್ಷನ್ ಬಳಿ ಮಂಗಳವಾರ ರಾತ್ರಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಮೂವರನ್ನು ಕಾವೂರು ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಬಂಧಿತರನ್ನು ಫರಂಗಿಪೇಟೆ ನಿವಾಸಿ ಮಹಮ್ಮದ್ ಫಾಜ್ (24), ಕೇರಳ ತ್ರಿಶೂರಿನ ಅರಟ್ಟುಪರಂಬಿಲ್ ನಿವಾಸಿ ಶರೀಫ್ ಎ ಎಸ್ (25) ಮತ್ತು ಸುಳ್ಯ ತಾಲೂಕಿನ ಗಾಂಧೀನಗರ ನಿವಾಸಿ ಮಹಮ್ಮದ್ ಅಶ್ರಫ್ (24) ಎಂದು ಗುರುತಿಸಲಾಗಿದೆ.

ಮೂವರನ್ನೂ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಹಮ್ಮದ್ ಫಾಜ್ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ. ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

- Advertisement -

Related news

error: Content is protected !!