- Advertisement -
- Advertisement -






ಬೆಂಗಳೂರು : ತಡರಾತ್ರಿ ಬೈಕ್ನಲ್ಲಿ ಲಾಂಗ್ ಡ್ರೈವ್ ಹೊರಟಿದ್ದ ಮೂವರು ವಿದ್ಯಾರ್ಥಿಗಳು ಹಿಟ್ ಆ್ಯಂಡ್ ರನ್ಗೆ ಬಲಿಯಾದ ಘಟನೆ ಬೆಂಗಳೂರು ನಗರ ಜಿಲ್ಲೆ ಉತ್ತರ ತಾಲೂಕಿನ ಚಿಕ್ಕಜಾಲ ಬಳಿಯ ಕೆಂಪೇಗೌಡ ಏರ್ಪೋರ್ಟ್ ರಸ್ತೆಯಲ್ಲಿ ನಡೆದಿದೆ.
ಮೂವರು ಯುವಕರು ಬೈಕ್ನಲ್ಲಿ ಲಾಂಗ್ ಡ್ರೈವ್ ಹೋಗಿದ್ದಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ಯುವಕರನ್ನು ರೋಹಿತ್(22), ಸುಚಿತ್(22), ಹರ್ಷ(22) ಎಂದು ಗುರುತಿಸಲಾಗಿದೆ.
ಮೃತ ಮೂವರು GKVKನಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಅಪಘಾತದ ಭೀಕರತೆಗೆ ಹೆದ್ದಾರಿಯಲ್ಲಿ ನಜ್ಜು ಗುಜ್ಜಾದ ಸ್ಥಿತಿಯಲ್ಲಿ ಮೃತ ದೇಹಗಳು ಚೆಲ್ಲಾಪಿಲ್ಲಿಯಾಗಿವೆ. ಅಪಘಾತದ ನಂತರ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಮೃತದೇಹಗಳು ಅಂಬೇಡ್ಕರ್ ಆಸ್ಪತ್ರೆ ಶವಾಗಾರದಲ್ಲಿ ಇಡಲಾಗಿದೆ. ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
- Advertisement -