Sunday, August 30, 2026
spot_imgspot_img
spot_imgspot_img

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

- Advertisement -
- Advertisement -

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿಗೆ ಮೂರು ವರ್ಷಗಳ ಸಂಭ್ರಮ. ಈ ಸಂಭ್ರಮದ ಸವಿನೆನಪಿಗಾಗಿ ಬೆಂಗಳೂರಿನ ವಿಧಾನಸೌಧ, ಬೆಳಗಾವಿಯ ಸುವರ್ಣಸೌಧ, ಮೈಸೂರು ಅರಮನೆ ಸೇರಿ ಹಲವೆಡೆ ಗುಲಾಬಿ ಬಣ್ಣದ ಲೈಟ್‌ಗಳು ಕಂಗೊಳಿಸಲಿವೆ.

ಬೆಂಗಳೂರಿನ ವಿಧಾನಸೌಧ, ಬೆಳಗಾವಿಯ ಸುವರ್ಣಸೌಧ, ಮೈಸೂರು ಅರಮನೆ, ಚಿತ್ರದುರ್ಗದ ಕಲ್ಲಿನಕೋಟೆ, ಹಂಪಿಯ ಕಲ್ಲಿನರಥ, ಮಂಗಳೂರಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡ, ಬೆಳಗಾವಿ ಕಿತ್ತೂರು ಚೆನ್ನಮ್ಮ ವೃತ್ತ ಇವೆಲ್ಲವೂ ಭಾನುವಾರ ಇಂದು (ಆ.30) ಸಂಜೆ 6ರಿಂದ ರಾತ್ರಿ 10ರವರೆಗೆ ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ.

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2,000 ರೂ. ನೀಡುವ ಮೂಲಕ ಮಹಿಳೆಯರು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ನೆರವಾಗಿರುವ ಗೃಹಲಕ್ಷ್ಮೀ ಯೋಜನೆ ಜಾರಿಗೆ ಬಂದು ಇದೇ ಆ.30ಕ್ಕೆ ಮೂರು ವರ್ಷಗಳನ್ನು ಪೂರೈಸಲಿದೆ.

ಸರ್ಕಾರವು ಗೃಹಲಕ್ಷ್ಮೀ ಯೋಜನೆ ಮೂರು ವರ್ಷಗಳನ್ನು ಪೂರೈಸುತ್ತಿರುವ ಈ ಸುಸಂದರ್ಭದಲ್ಲಿ ಮಹಿಳೆಯರ ಹೆಮ್ಮೆಯ ಸಂಕೇತವೆಂದು ಗುರುತಿಸಿರುವ ಗುಲಾಬಿ ಬಣ್ಣದ ಬೆಳಕಿನ ವ್ಯವಸ್ಥೆಯನ್ನು ಮಾಡಲಾಗಿದೆ. ಇದುವರೆಗೂ ಸದರಿ ಯೋಜನೆ ಅಡಿ 1.20 ಕೋಟಿ ಫಲನುಭವಿಗಳ ಖಾತೆಗೆ 76,500 ಕೋಟಿ ರೂ.ಗೂ ಹೆಚ್ಚು ಹಣ ಪಾವತಿಸಲಾಗಿದೆ.

- Advertisement -

Related news

error: Content is protected !!