Saturday, April 27, 2024
spot_imgspot_img
spot_imgspot_img

ಕಾರು-ಲಾರಿ ನಡುವೆ ಭೀಕರ ಅಪಘಾತ; ಮೂವರು ಮೃತ್ಯು

- Advertisement -G L Acharya panikkar
- Advertisement -

ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನಪ್ಪಿದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಗ್ರಾಮದ ಬಳಿ ನಡೆದಿದೆ.

ಮೃತರನ್ನು ಪಾವಗಡ ತಾಲ್ಲೂಕಿನ ಗುಜ್ಜನುಡು ಗ್ರಾಮದ ಆಕಾಶ್ (26), ಕಾರ್ತಿಕ್ (28) ಹೇಮಂತ್ (30) ಮೃತರು. ಗಾಯಾಳು ಉಜ್ವಲ್ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನಿಂದ ಪಾವಗಡಕ್ಕೆ ಹೋಗುತ್ತಿದ್ದ ಕಾರು ಪಾವಗಡದಿಂದ ಬೆಂಗಳೂರಿಗೆ ತೆರಳುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ.

ಅಪಘಾತದ ಭೀಕರತೆ ಎಂದರೇ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮಧುಗಿರಿ ಸಾರ್ವಜನಿಕ ಆಸ್ಪತ್ರೆಯ ಶವಗಾರದ‌ ಬಳಿ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!