Tuesday, January 26, 2021

ಗುಂಡು ಹಾರಿಸಿ ಪತ್ನಿಯನ್ನು ಕೊಲೆಗೈದ ಪತಿ

ತುಮಕೂರು: ಗುಂಡು ಹಾರಿಸಿ ಪತ್ನಿಯನ್ನು ಪತಿ ಕೊಲೆಗೈದಿರುವ ಭೀಕರ ಘಟನೆ ತಾಲೂಕಿನ ಡಿ.ಕೊರಟಗೆರೆಯಲ್ಲಿ ನಿನ್ನೆ ರಾತ್ರಿ ನಡೆದಿದೆ.

ಶಾರದ (28) ಕೊಲೆಯಾದ ದುರ್ದೈವಿ. ಆಕೆಯ ಪತಿ ಕೃಷ್ಣಪ್ಪ ಈ ಕೃತ್ಯ ಎಸಗಿದ್ದಾನೆ.ಬೇಟೆಗೆಂದು ಸ್ನೇಹಿತನ ಬಳಿ ನಾಡಬಂದೂಕು ತೆಗೆದುಕೊಂಡು ಬಂದಿದ್ದ ಆರೋಪಿ, ಗುಂಡು ಹಾರಿಸೋದು ತೋರಿಸುತ್ತೇನೆಂದು ಹೇಳಿ ಶಾರದಾ ತಲೆಗೆ ಗುಂಡಿಟ್ಟು ಕೊಂದಿದ್ದಾನೆ ಎನ್ನಲಾಗಿದೆ.

ಇನ್ನು ಕೊಲೆಗೆ ಕಾರಣ ತಿಳಿದುಬಂದಿಲ್ಲಾ. ಘಟನಾ ಸ್ಥಳಕ್ಕೆ ಹೆಬ್ಬೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭವಾಗಿದೆ.

- Advertisement -

MOST POPULAR

HOT NEWS

Related news

error: Content is protected !!