Sunday, June 7, 2026
spot_imgspot_img
spot_imgspot_img

ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಟಿಪ್ಪರ್ ಲಾರಿ ಢಿಕ್ಕಿ-ಗಂಭೀರ ಗಾಯಗೊಂಡಿದ್ದ ಬಸ್ ಚಾಲಕ ಸಾವು

- Advertisement -
- Advertisement -

ಬೆಂಗಳೂರು (ನ,6): ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಟಿಪ್ಪರ್ ಲಾರಿ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿ ಗಂಭೀರ ಗಾಯಗೊಂಡಿದ್ದ ಬಸ್ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟ ಘಟನೆ ಬೆಂಗಳೂರಿನ ಆನೇಕಲ್ ಸಮೀಪ ನಡೆದಿದೆ. ಮೃತ ಬಸ್ ಚಾಲಕನನ್ನು ಅಭಿಬ್ ಜಾನ್(55) ಎಂದು ಗುರುತಿಸಲಾಗಿದೆ.

ಆನೇಕಲ್ ಗೆ ಬರುತ್ತಿದ್ದ ವೇಳೆ ಬಸ್ ಹಾಗೂ ಟಿಪ್ಪರ್ ಮಧ್ಯೆ ಡಿಕ್ಕಿ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ತೀವ್ರ ಗಾಯಗೊಂಡಿದ್ದ ಬಸ್ ಚಾಲಕ ಅಭಿಬ್ ಜಾನ್(55) ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ನಿನ್ನೆ(ನ.05) ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.


ಅಪಘಾತ ಸಂಭವಿಸುತ್ತಿದ್ದಂತೆ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಗಾಯಗೊಂಡ ಬಸ್ ಚಾಲಕನನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಬಸ್ ನಲ್ಲಿದ್ದ ಐದಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!