Saturday, June 20, 2026
spot_imgspot_img
spot_imgspot_img

ಟಿಪ್ಪರ್‌-ಕಾರು ಮುಖಾಮುಖಿ ಡಿಕ್ಕಿ; ಐವರು ಸ್ಥಳದಲ್ಲೇ ಮೃತ್ಯು..!

- Advertisement -
- Advertisement -

ಚಾಮರಾಜನಗರ: ಟಿಪ್ಪರ್‌ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಸಮೀಪ ಘಟನೆ ನಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಉರುಳಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟ ಐವರು ಮಂಡ್ಯ ಮೂಲದವರು ಎಂದು ತಿಳಿದುಬಂದಿದೆ.

ಮಾದಪ್ಪನ ಭಕ್ತರು ಕೊಳ್ಳೇಗಾಲ ಕಡೆಯಿಂದ ಮಹದೇಶ್ವರ ಬೆಟ್ಟದ ಕಡೆಗೆ ಹೋರಟಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!