Thursday, May 2, 2024
spot_imgspot_img
spot_imgspot_img

ಉಡುಪಿ: ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ: ಬೈಕ್‌ ಸವಾರ ಸ್ಥಳದಲ್ಲೇ ಮೃತ್ಯು

- Advertisement -G L Acharya panikkar
- Advertisement -

ಉಡುಪಿ: ಹಿಂದಿನಿಂದ ಬಂದ ಟಿಪ್ಪರ್ ವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಟಿಪ್ಪರ್ ನ ಚಕ್ರದಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿ-ಅಂಬಾಗಿಲು ಮುಖ್ಯ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.

ಮೃತ ರನ್ನು ಬ್ರಹ್ಮಾವರ ಮಟಪಾಡಿ ನಿವಾಸಿ ಪ್ರಭಾಕರ ಆಚಾರಿ ಎಂದು ಗುರುತಿಸಲಾಗಿದೆ.

ಪ್ರಭಾಕರ ಆಚಾರಿಯವರು ಅಂಬಾಗಿಲಿನಿಂದ ಪೆರಂಪಳ್ಳಿ ಕಡೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದು, ಈ ವೇಳೆ ಅಂಬಾಗಿಲು- ಪೆರಂಪಳ್ಳಿ ರಸ್ತೆಯ ತಿರುವಿನಲ್ಲಿ ಹಿಂಬದಿಯಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ.
ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ ಟಿಪ್ಪರ್ ನ ಚಕ್ರದಡಿಗೆ ಸಿಲುಕಿದ ಪ್ರಭಾಕರ್ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ನಲ್ಲಿದ್ದ ಸಹಸವಾರ ಗಂಭೀರವಾಗಿ ಗಾಯಗೊಂಡಿದ್ದು, ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!