Monday, June 15, 2026
spot_imgspot_img
spot_imgspot_img

ರಾಷ್ಟ್ರೀಯ ಹೆದ್ದಾರಿ- 66 ರಲ್ಲಿ ಕಾರಿಗೆ ಟಿಪ್ಪರ್ ಡಿಕ್ಕಿ-ಕಾರು ಜಖಂ

- Advertisement -
- Advertisement -

ಕೋಟೇಶ್ವರ : ಬೀಜಾಡಿ ರಾಷ್ಟ್ರೀಯ ಹೆದ್ದಾರಿ- 66 ರಲ್ಲಿ ಕಾರಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡು ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.

ಬೀಜಾಡಿ ಸರ್ವಿಸ್ ರಸ್ತೆಯಿಂದ ಹೆದ್ದಾರಿಗೆ ಹೋಗುತ್ತಿದ್ದ ಕಾರು ಕುಂಭಾಸಿಯಿಂದ ಕುಂದಾಪುರದ ಕಡೆಗೆ ಅತಿವೇಗವಾಗಿ ಬಂದ ಟಿಪ್ಪರ್ ಕಾರಿಗೆ ಗುದ್ದಿದ ಪರಿಣಾಮ ಕಾರು ಸಂಪೂರ್ಣ ಹಾನಿಯಾಗಿದೆ. ಟಿಪ್ಪರ್ ನಿಯಂತ್ರಣ ತಪ್ಪಿ ಹೆದ್ದಾರಿ ಡಿವೈಡರ್ ಮಧ್ಯದಲ್ಲಿ ನಿಂತಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ .ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ.

- Advertisement -

Related news

error: Content is protected !!