Sunday, June 14, 2026
spot_imgspot_img
spot_imgspot_img

ಟಿಪ್ಪು ಸುಲ್ತಾನ್ ಬಗ್ಗೆ ವಿಶ್ವನಾಥ್ ಹೇಳಿಕೆ : ಹಳ್ಳಿಹಕ್ಕಿ ಪರ ಡಿ.ಕೆ.ಸುರೇಶ್ ಬ್ಯಾಟಿಂಗ್

- Advertisement -
- Advertisement -

ಬೆಂಗಳೂರು: ಟಿಪ್ಪು ಸುಲ್ತಾನ್ ಈ ನೆಲದ ಮಗ ಎಂದು ಹೇಳಿಕೆ ನೀಡಿದ್ದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಪರ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಬ್ಯಾಟಿಂಗ್ ಬೀಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್.ವಿಶ್ವನಾಥ್ ಹೇಳಿಕೆ ಸತ್ಯ. ಟಿಪ್ಪು ಸುಲ್ತಾನ್ ಈ ನೆಲದ ಮಗ ಎಂದು ಹೇಳಿದರು. ಈ ಹಿಂದೆ ಕೆಜೆಪಿ ಶುರು ಮಾಡಿದಾಗ ಕೂಡ ಸಿಎಂ ಬಿ.ಎಸ್ ಯಡಿಯೂರಪ್ಪ ಕೂಡ ಇದೇ ಮಾತನ್ನು ಹೇಳಿದ್ದರು. ಆದರೆ ಈಗ ಚುನಾವಣೆ ದೃಷ್ಟಿಯನ್ನು ಮುಂದಿಟ್ಟುಕೊಂಡು ಬಿಜೆಪಿ ಇತಿಹಾಸ ಬದಲಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ಇನ್ನು. ಎಚ್,ವಿಶ್ವನಾಥ್ ಹೇಳಿಕೆಯನ್ನು ಅಲ್ಲಗಳೆಯಲು ಸಾಧ್ಯವಿಲ್ಲ. ಹಿಂದೆ ಯಡಿಯೂರಪ್ಪ ಟಿಪ್ಪು ಜಯಂತಿ ಮಾಡಿದ್ದನ್ನು ಅಲ್ಲಗಳೆಯಲು ಆಗಲ್ಲ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಟಿಪ್ಪು ಹೊಗಳಿದ್ದನ್ನು ಅಲ್ಲಗಳೆಯಲು ಸಾಧ್ಯವಿಲ್ಲ ಎಂದರು.

- Advertisement -

Related news

error: Content is protected !!