Thursday, September 24, 2026
spot_imgspot_img
spot_imgspot_img

ಕಿರುಕುಳಕ್ಕೆ ಬೇಸತ್ತು ಗುತ್ತಿಗೆದಾರ ಆತ್ಮಹತ್ಯೆ

- Advertisement -
- Advertisement -

ಕಿರುಕುಳಕ್ಕೆ ಬೇಸತ್ತು ಗುತ್ತಿಗೆದಾರ ಹಿಂದೂ ಪರ ಸಂಘಟನೆ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಕೊಪ್ಪಳ ನಗರದ ಬಿ.ಟಿ. ಪಾಟೀಲ್ ನಗರದ ರಾಜೀವ ಬಗಾಡೆ (50) ಮೃತ ಗುತ್ತಿಗೆದಾರ. ಕಳೆದ ನಾಲ್ಕು ದಿನದ ಹಿಂದೆ ವಿಷ ಸೇವಿಸಿದ್ದ ರಾಜೀವ ಬಗಾಡೆಗೆ ಕೊಪ್ಪಳದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತ ಗುತ್ತಿಗೆದಾರ ತನ್ನ ಸಾವಿಗೆ ಯಾರೆಲ್ಲ ಕಾರಣ ಎಂಬುದನ್ನು ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಲ್ಲದೇ, ವಿಡಿಯೋ ದಾಖಲಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾನು ಕೆಲ ಸರ್ಕಾರಿ ಕಾಮಗಾರಿಗಳನ್ನು ಉಪ ಗುತ್ತಿಗೆ ಪಡೆದು ಕೆಲಸ ನಿರ್ವಹಿಸಿದ್ದು, ಕಾಮಗಾರಿ ಪೂರ್ಣಗೊಂಡರೂ ಹಣ ಪಾವತಿ ಮಾಡಿಲ್ಲ. ಕೆಲವರು ಹಣ ಪಡೆದು ವಾಪಸ್ ನೀಡಿಲ್ಲ. ಈ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ, ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

- Advertisement -

Related news

error: Content is protected !!