Monday, February 10, 2025
spot_imgspot_img
spot_imgspot_img

ಪತ್ನಿಯ ಕಾಟಕ್ಕೆ ಬೇಸತ್ತು ಮೆಟ್ರೋ ಎಂಜಿನಿಯರ್‌ ಆತ್ಮಹತ್ಯೆ..!

- Advertisement -
- Advertisement -

ಪತ್ನಿಯ ಕಾಟಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ಕೆ.ಬಿ ಕ್ರಾಸ್ ಬಳಿಯ ಕುಂದೂರು ಪಾಳ್ಯದಲ್ಲಿ ನಡೆದಿದೆ.

ಮಂಜುನಾಥ್ (38) ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಮೃತ ದುರ್ದೈವಿ. ಬೆಂಗಳೂರಿನ ಬಿಎಂಆರ್ ಸಿಎಲ್ ನಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಮಂಜುನಾಥ್, ಕಳೆದ 10 ವರ್ಷದ ಹಿಂದೆ ತುರುವೇಕೆರೆ ಮೂಲದ ಪ್ರೀಯಾಂಕಳನ್ನ ಮದುವೆಯಾಗಿದ್ದ. ಬಳಿಕ ದಂಪತಿ ಬೆಂಗಳೂರಿನಲ್ಲಿ ವಾಸವಿತ್ತು. ಆದರೆ ಹೊಂದಾಣಿಕೆ ಇಲ್ಲದೇ ಪದೇ ಪದೇ ಗಂಡ ಹೆಂಡತಿ ನಡುವೆ ಗಲಾಟೆ ನಡೆಯುತ್ತಿತ್ತು. ನೀನು ಹಳ್ಳಿ ಗುಗ್ಗು ನಿನ್ನನ್ನ ಮದುವೆಯಾಗಲು ನನಗೆ ಇಷ್ಟ ಇರಲಿಲ್ಲ ಎಂದು ಪ್ರೀಯಾಂಕ, ಪತಿ ಮಂಜುನಾಥನಿಗೆ ಪದೇ ಪದೇ ಕಿಚಾಯಿಸುತ್ತಿದ್ದಳಂತೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಪದೇ ಪದೇ ಗಲಾಟೆ ನಡೆಯುತ್ತಿತ್ತು. ಕೊನೆಗೆ ಇದೀಗ ಮಂಜುನಾಥ್ ಪತ್ನಿಯ ಕಿರುಕುಳಕ್ಕೆ ಮನನೊಂದು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆತ್ಮಹತ್ಯೆಯ ಮುನ್ನ ತನ್ನ ಸಹೋದರನಿಗೆ ಆಡಿಯೋ ಮೇಸೆಜ್ ಕಳುಹಿಸಿದ್ದು, ನನಗೆ ಅವಳ ಜೊತೆ ಜೀವನ ಮಾಡುವುದಕ್ಕೆ ಆಗುತ್ತಿಲ್ಲ. ಆ ಮನೆ ಹಾಳಿಯಿಂದ ನಾನು ಸಾಯುತ್ತಿದ್ದೇನೆ. ನನ್ನ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಆಡಿಯೋ ಮೇಸೆಜ್ ಮಾಡಿ ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಈ ಬಗ್ಗೆ ಪತ್ನಿ ಪ್ರೀಯಾಂಕಳ ವಿರುದ್ಧ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

- Advertisement -

Related news

error: Content is protected !!