- Advertisement -
- Advertisement -


ತೀರ್ಥಹಳ್ಳಿ: ದೇವಸ್ಥಾನದ ಹುಂಡಿ ಕಳ್ಳತನಕ್ಕೆ ಯತ್ನಿಸಿದ ವ್ಯಕ್ತಿಯನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಖದೀಮನನ್ನು ಭದ್ರಾವತಿ ಮೂಲದ ವ್ಯಕ್ತಿ ಎಂದು ಗುರುತಿಸಲಾಗಿದೆ
ತಾಲೂಕಿನ ಮಹಿಷಿ ಗ್ರಾಮದ ಅಶ್ವಥನಾರಾಯಣ ಸ್ವಾಮಿ ದೇವಸ್ಥಾನದ ಹುಂಡಿಯಲ್ಲಿನ ಹಣ ಕಳ್ಳತನಕ್ಕೆ ಸ್ಕೆಚ್ ಹಾಕಿದ್ದ ಈತನನ್ನು ಹಿಡಿದ ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಹಾಕಿದ್ದು, ಬಳಿಕ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಘಟನೆ ಬಗ್ಗೆ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



- Advertisement -








