Monday, July 7, 2025
spot_imgspot_img
spot_imgspot_img

ಕೋವಿಡ್ ನಿಯಮ ಉಲ್ಲಂಘಿಸಿದ ಕೇರಳದ ಮುಖ್ಯಮಂತ್ರಿ ವಿರುದ್ಧ ದೂರು ದಾಖಲು!

- Advertisement -
- Advertisement -

ತಿರುವನಂತಪುರ: ಕೋವಿಡ್‌-19 ಮಾರ್ಗಸೂಚಿಗಳು ಹಾಗೂ ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇರೆಗೆ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಎಲ್‌ಡಿಎಫ್ ನಾಯಕರ ವಿರುದ್ಧ ಕೇಂದ್ರದ ಮಾಜಿ ಸಚಿವ, ಕೇರಳ ಕಾಂಗ್ರೆಸ್‌ನ ಹಿರಿಯ ನಾಯಕ ಪಿ.ಸಿ. ಥಾಮಸ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

‘ತಿರುವನಂತಪುರ ಜಿಲ್ಲೆಯಲ್ಲಿ ಲಾಕ್‌ಡೌನ್ ವಿಧಿಸಲಾಗಿದೆ. ಈ ಸ್ಥಿತಿಯಲ್ಲಿ ಇಲ್ಲಿನ ಎಕೆಜಿ ಕೇಂದ್ರದಲ್ಲಿ ವಿಜಯನ್ ಮತ್ತು ಇತರ 22 ಮಂದಿ ಕಾನೂನುಬಾಹಿರವಾಗಿ ಗುಂಪುಗೂಡಿದ್ದಾರೆ. ದೈಹಿಕ ಅಂತರ ಪಾಲಿಸದೇ ವಿಧಾನಸಭಾ ಚುನಾವಣೆಯ ಗೆಲುವನ್ನು ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ’ ಎಂದು ಥಾಮಸ್ ದೂರಿದ್ದಾರೆ.

‘ಕೇರಳ ಸಾಂಕ್ರಾಮಿಕ ರೋಗಗಳ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ವಿಭಾಗಗಳ ಅಡಿಯಲ್ಲಿ ಈ ಕೃತ್ಯವು ಶಿಕ್ಷಾರ್ಹ ಅಪರಾಧವಾಗಿದೆ, ಜೊತೆಗೆ ಕೇಂದ್ರದ ಮಾರ್ಗಸೂಚಿಗಳು ಮತ್ತು ಸಾಂವಿಧಾನಿಕ ಮಾನದಂಡಗಳ ಉಲ್ಲಂಘನೆಯಾಗಿದೆ’ ಎಂದೂ ಅವರು ಹೇಳಿದ್ದಾರೆ.

- Advertisement -

Related news

error: Content is protected !!