- Advertisement -
- Advertisement -



ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಮುಂದಿನ 48 ಗಂಟೆಗಳ ಕಾಲ ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಪ.ಪೂರ್ವ ಕಾಲೇಜುಗಳಿಗೆ ಜುಲೈ 06ರ ಶನಿವಾರ ರಜೆ ಘೋಷಿಸಲಾಗಿದೆ.
ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಖಾಸಗಿ ಪ್ರಾಥಮಿಕ ಪ್ರೌಢಶಾಲೆಗಳಿಗೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ( 12 ನೇ ತರಗತಿ) ಭಾರೀ ಮಳೆ ಹಿನ್ನೆಲೆಯಲ್ಲಿ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿ ಆದೇಶಿಸಿದ್ದಾರೆ.

- Advertisement -