Monday, May 6, 2024
spot_imgspot_img
spot_imgspot_img

ಇಂದು ಬಿಜೆಪಿಯ ಮಹತ್ವದ ಸಭೆ; ಯಾರಾಗಲಿದ್ದಾರೆ ವಿರೋಧ ಪಕ್ಷದ ನಾಯಕ, ರಾಜ್ಯಾಧ್ಯಕ್ಷ?

- Advertisement -G L Acharya panikkar
- Advertisement -
vtv vitla

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭಿಸಿರುವ ಬಿಜೆಪಿಯು ನೂತನ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳ ಅವಲೋಕನ ಸಭೆಯನ್ನು ಕರೆಯಲಾಗಿದ್ದು, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಇಂದು ಸಂಜೆ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದೆ.

ಸಭೆಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ, ವಿರೋಧ ಪಕ್ಷದ ನಾಯಕ ಹಾಗೂ ಹೊಸ ರಾಜ್ಯಾಧ್ಯಕ್ಷ ಆಯ್ಕೆ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ. ಪ್ರಸ್ತುತ ಬಿಜೆಪಿ ಪ್ರತಿಪಕ್ಷದ ನಾಯಕನ ಆಯ್ಕೆಯೂ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ವಿಜಯಪುರ ಶಾಸಕ ಬಸನಗೌಡ ಪಾಟೀಲ ಪ್ರತಿಪಕ್ಷ ನಾಯಕ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಶಾಸಕಾಂಗ ಪಕ್ಷದ ನಾಯಕ ಮತ್ತು ಪಕ್ಷದ ನೂತನ ಅಧ್ಯಕ್ಷರ ಆಯ್ಕೆ ಸಂಬಂಧ ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳ ಅಭಿಪ್ರಾಯವನ್ನೂ ಆಲಿಸಲಾಗುತ್ತದೆ.

ಇಲ್ಲಿ ವ್ಯಕ್ತವಾಗುವ ಅಭಿಪ್ರಾಯಗಳನ್ನು ಆಧರಿಸಿ ಪಕ್ಷದ ವರಿಷ್ಠರು ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆಂದು ತಿಳಿದುಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 7ರಂದು ಬಜೆಟ್ ಅಧಿವೇಶನ ನಡೆಸುವ ಸಾಧ್ಯತೆ ಇದ್ದು, ಅದಕ್ಕೂ ಮುನ್ನ ತೆರವಾಗಿರುವ ಸ್ಥಾನವನ್ನು ಬಿಜೆಪಿ ಭರ್ತಿ ಮಾಡುವ ನಿರೀಕ್ಷೆ ಇದೆ. ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಅವಧಿ ಕಳೆದ ವರ್ಷ ಆಗಸ್ಟ್‌ನಲ್ಲಿ ಕೊನೆಗೊಂಡಿತ್ತು. ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯ ಕಾರಣದಿಂದ ಅವಧಿಯನ್ನು ವಿಸ್ತರಿಸಲಾಗಿತ್ತು.

ಇದೀಗ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆಯೂ ಬಿಜೆಪಿ ವಲಯದಲ್ಲಿ ಚರ್ಚೆಗಳು ನಡೆಯುತ್ತಿದ್ದು, ಯಾರಾಗಲಿದ್ದಾರೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ. ಇಂದು ಒಟ್ಟು ಮೂರು ಸಭೆ ನಡೆಯಲಿದ್ದು, ಮೊದಲಿಗೆ ಬೆಳಗ್ಗೆ 10.30ಕ್ಕೆ ನೂತನ ಶಾಸಕರ ಸಭೆ ನಡೆಯಲಿದೆ. ಬಳಿಕ ಮಧ್ಯಾಹ್ನ ಪರಾಜಿತ ಅಭ್ಯರ್ಥಿಗಳ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಮೊದಲಾದವರು ಪಾಲ್ಗೊಳ್ಳಲಿದ್ದಾರೆ.

- Advertisement -

Related news

error: Content is protected !!