ಬೆಂಗಳೂರು: ಕೊರೊನಾ ಸೋಂಕಿನ ಭೀತಿಯ ನಡುವೆಯೇ ನಡೆದ 2020-21ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಆಗಸ್ಟ್ 10ರೊಳಗೆ ಪ್ರಕಟಿಸಲಾಗುವುದು ಎಂದು ಎಸ್ ಸುರೇಶ್ ಕುಮಾರ್ ಈ ಮುಂಚೆ ಮಾಹಿತಿ ನೀಡಿದ್ದರು.
ಒಎಂಆರ್ ಉತ್ತರ ಪತ್ರಿಕೆಗಳನ್ನು ಡಿಜಿಟಲ್ ಸ್ಕ್ಯಾನಿಂಗ್‌ಗೆ ಕಳುಹಿಸಿ ನಂತರ ಮೌಲ್ಯಮಾಪನ ಮಾಡಿ ಶೀಘ್ರವೇ ಫಲಿತಾಂಶ ಪ್ರಕಟ ಮಾಡುವ ಬಗ್ಗೆ ತಿಳಿಸಿದ್ದರು. ಆದರೆ ಇದೀಗ ಇಂದು ಅಥವಾ ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ರೆಪೊ ದರದಲ್ಲಿ ಬದಲಾವಣೆ ಇಲ್ಲ; ಗವರ್ನರ್ ಶಕ್ತಿಕಾಂತ್ ದಾಸ್ ಘೋಷಣೆ
ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಈಗಾಗಲೇ ಮೌಲ್ಯಮಾಪನವನ್ನು ಪೂರ್ಣಗೊಳಿಸಿದ್ದು, ಫಲಿತಾಂಶ ಪ್ರಕಟನೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಆದೇಶವನ್ನು ಮಂಡಳಿ ನಿರೀಕ್ಷಿಸುತ್ತಿದ್ದು, ಅವರ ಆದೇಶ ಬರುತ್ತಿದ್ದಂತೆಯೇ ಫಲಿತಾಂಶ ಪ್ರಕಟನೆ ಮಾಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ವಿದ್ಯಾರ್ಥಿಗಳು ಫಲಿತಾಂಶವನ್ನು ಪರಿಶೀಲಿಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧೀಕೃತ ವೆಬ್‌ಸೈಟ್ http://kseeb.kar.nic.in ಅಥವಾ karresult.nic.inಗೆ ಭೇಟಿ ನೀಡಿ ಅಲ್ಲಿ ವಿದ್ಯಾರ್ಥಿಗಳು ರಿಜಿಸ್ಟರ್ ಸಂಖ್ಯೆ ಹಾಗೂ ಜನ್ಮ ದಿನಾಂಕ ಮಾಹಿತಿ ಒದಗಿಸಿ ಕ್ಲಿಕ್ ಮಾಡಿದರೆ ಫಲಿತಾಂಶದ ಮಾಹಿತಿ ದೊರೆಯುತ್ತದೆ.