Tuesday, September 28, 2021
spot_imgspot_img
spot_imgspot_img

ಒಲಿಂಪಿಕ್ಸ್: ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಬಾಕ್ಸರ್ ಸತೀಶ್ ಕುಮಾರ್ ಹಾಗೂ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು

- Advertisement -
- Advertisement -

ಭಾರತೀಯ ಬ್ಯಾಡ್ಮಿಂಟನ್ ತಾರೆ, 2016ರ ರಿಯೋ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ವಿಜೇತೆ ಭಾರತದ ಹೆಮ್ಮೆಯ ಪಿ.ವಿ. ಸಿಂಧು, ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕ್ವಾರ್ಟರ್ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ. ಪ್ರೀ ಕ್ವಾರ್ಟರ್ ಫೈನಲ್ ನಲ್ಲಿ ಡೆನ್ಮಾರ್ಕ್ ನ ಮಿಯಾ ಬ್ಲಿಕ್ ಫೆಲ್ಟ್ ಅವರನ್ನು ಮಣಿಸಿದರು.

ಟೋಕಿಯೊ ಒಲಿಂಪಿಕ್ಸ್ ನಲ್ಲಿ ಜಮೈಕಾದ ರಿಕರ‍್ಡೊ ಬ್ರೌನ್ ಅವರನ್ನು 4-1 ರಿಂದ ಸೋಲಿಸುವ ಮೂಲಕ, ಬಾಕ್ಸರ್ ಸತೀಶ್ ಕುಮಾರ್ ಅವರು, 91 ಕೆಜಿ ವಿಭಾಗದಲ್ಲಿ ಕ್ವಾಟರ್ ಫೈನಲ್ ಪ್ರವೇಶಿಸಿದ್ದಾರೆ.

ಒಂದೆಡೆ ಭಾರತದ ಪಿವಿ ಸಿಂಧು ಫೈನಲ್ ಪ್ರವೇಶಿಸಿದ್ದರೇ, ಪುರುಷರ ವಿಭಾಗದಲ್ಲಿ ಹಾಕಿ ಆಟಗಾರರು ಕೂಡ ಫೈನಲ್ ಗೆ ಲಗ್ಗೆ ಇಟ್ಟಿದ್ದಾರೆ. ಇದೇ ಸಂದರ್ಭ 91 ಕೆಜಿ ವಿಭಾಗದಲ್ಲಿ ಬಾಕ್ಸರ್ ಸತೀಶ್ ಕುಮಾರ್ ಅವರು, 4-1 ರಿಂದ ಜಮೈಕಾದ ರಿಕರ‍್ಡೋ ಬ್ರೌನ್ ಅವರನ್ನು ಮಣಿಸುವ ಮೂಲಕ ಕ್ವಾಟರ್ ಫೈನಲ್ ಪ್ರವೇಶಿಸಿದ್ದಾರೆ.

ಸದ್ಯ ಟೋಕಿಯೊ ಒಲಿಂಪಿಕ್ಸ್ ನಲ್ಲಿ ಬ್ಯಾಡ್ಮಿಂಟನ್ ವಿಭಾಗದಲ್ಲಿ ಪಿ.ವಿ.ಸಿಂಧು ಭಾರತದ ಏಕೈಕ ಆಶಾಕಿರಣವಾಗಿದ್ದಾರೆ. ಪುರುಷರ ವಿಭಾಗದಲ್ಲಿ ಸ್ಪರ್ಧಿಸಿದ್ದ ಸಾಯಿ ಪ್ರಣೀತ್ ಸೋಲನುಭವಿಸಿದ್ದಾರೆ.
ಡಬಲ್ಸ್ ವಿಭಾಗದಲ್ಲಿ ಸ್ಪರ್ಧಿಸಿದ್ದ ಚಿರಾಗ್ ಶೆಟ್ಟಿ- ಸಾತ್ವಿಕ್ ಸಾಯ್ ರಾಜ್ ರಾಂಕಿರೆಡ್ಡಿ ಮಂಗಳವಾರ ಸೋಲನುಭವಿಸಿದ್ದರು. ಗ್ರೂಪ್ ಹಂತದಲ್ಲಿ ಎರಡು ಪಂದ್ಯಗಳನ್ನು ಈ ಜೋಡಿ ಗೆದ್ದಿತ್ತು.

- Advertisement -
- Advertisement -

MOST POPULAR

HOT NEWS

Related news

error: Content is protected !!