Saturday, June 28, 2025
spot_imgspot_img
spot_imgspot_img

ದ.ಕ ಜಿಲ್ಲೆಯಲ್ಲಿ ನಾಳೆ(ಜು.16) ಕೂಡಾ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಮುಂದುವರಿಕೆ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ‌ ಮುಂದುವರೆದಿದೆ. ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ 16-7-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿದೆ.

ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ , ಸರಕಾರಿ ಅನುದಾನಿತ ಮತ್ತು ಖಾಸಗಿ ,ಪ್ರಾಥಮಿಕ ಪ್ರೌಢಶಾಲೆ , ಪದವಿ ಪೂರ್ವ ಕಾಲೇಜುಗಳಿಗೆ ಜು.16ರಂದು ರಜೆಯನ್ನು ಮುಂದುವರೆಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

- Advertisement -

Related news

error: Content is protected !!