Friday, April 19, 2024
spot_imgspot_img
spot_imgspot_img

ನಾಳೆ (ಜ. 22) ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮದ ಹಿನ್ನಲೆ ಯಾವುದೇ ಅಹಿತಕರ ಘಟಣೆಗಳು ನಡೆಯದಂತೆ ದ. ಕ ಜಿಲ್ಲಾ ಪೊಲೀಸ್ ಇಲಾಖೆಯಿಂದ ಸೂಚನೆ

- Advertisement -G L Acharya panikkar
- Advertisement -

ನಾಳೆ (ಜ. 22) ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮದ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟಣೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ, ಈಗಾಗಲೇ ಕೆ.ಎಸ್.ಆರ್.ಪಿ ಪಡೆ ಹಾಗೂ ಡಿ.ಎ.ಆರ್ ಪಡೆಗಳನ್ನು ಜಿಲ್ಲೆಯಾದ್ಯಂತ ನಿಯೋಜಿಸಲಾಗಿದೆ.

ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ, ಆಯಾ ಠಾಣಾ ಪೊಲೀಸರಿಂದ ಹಗಲು ಗಸ್ತು ಹಾಗೂ ರಾತ್ರಿ ಗಸ್ತನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ.

ಇದರೊಂದಿಗೆ ಈ ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುವ ಸುದ್ದಿಗಳ ಮೇಲೆಯೂ ನಿರಂತರವಾಗಿ ನಿಗಾವಹಿಸಲಾಗುತ್ತಿದೆ. ಸೂಕ್ತ ಅನುಮತಿ ಪಡೆಯದೇ ಸಾರ್ವಜನಿಕವಾಗಿ ಯಾವುದೇ ರೀತಿಯ ಅಕ್ಷೇಪಾರ್ಹ ಬರಹ ಅಥವಾ ಬಿತ್ತಿಚಿತ್ರಗಳು ಪ್ರದರ್ಶಿಸುವುದು ಅಥವಾ ಅವುಗಳನ್ನು ಅಳವಡಿಸಿದಲ್ಲಿ ಕಠಿಣ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತುರ್ತು ಸಂಪರ್ಕಕ್ಕಾಗಿ ದ.ಕ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ 0824 2220500 ಅಥವಾ 112 ಸಹಾಯವಾಣಿಯನ್ನು ಸಾರ್ವಜನಿಕರು ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ.

- Advertisement -

Related news

error: Content is protected !!