Friday, June 27, 2025
spot_imgspot_img
spot_imgspot_img

ನಾಳೆ SSLC ಪರೀಕ್ಷೆ ಫಲಿತಾಂಶ ಪ್ರಕಟ..!

- Advertisement -
- Advertisement -

ಬೆಂಗಳೂರು: 2023-24 ರ SSLC ಪರೀಕ್ಷೆಯ ಫಲಿತಾಂಶ ಮೇ 9 ರ ಬೆಳಗ್ಗೆ 10.30ಕ್ಕೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಮಾರ್ಚ್‌ 25 ರಿಂದ ಎಪ್ರಿಲ್ 6 ರ ವರೆಗೆ ಪರೀಕ್ಷೆ ನಡೆಸಲಾಗಿದ್ದು, ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪೂರ್ಣಗೊಂಡಿದೆ. ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಈ ಬಾರಿ ಫಲಿತಾಂಶ ಬಿಡುಗಡೆಗೆ ವಿಳಂಭವಾಗಿದೆ ಎಂದು ಹೇಳಿದೆ/

2023- 24ರ SSLC ಪರೀಕ್ಷೆಯಲ್ಲಿ ಈ ಬಾರಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು. ಸಾಮಾನ್ಯ ವಿದ್ಯಾರ್ಥಿಗಳ ಜೊತೆಯಲ್ಲಿ 18,225 ಖಾಸಗಿ ವಿದ್ಯಾರ್ಥಿಗಳು ಮತ್ತು 41,375 ವಿದ್ಯಾರ್ಥಿಗಳು ರೀ ಎಕ್ಸಾಂ ಬರೆದಿದ್ದಾರೆ. ಇದರಲ್ಲಿ 4.41 ಲಕ್ಷ ಬಾಲಕರು ಮತ್ತು 4.28 ಲಕ್ಷ ಬಾಲಕಿಯರು ಇದ್ದಾರೆ.

ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ (ನೋಂದಣಿ ಸಂಖ್ಯೆ) ಮೂಲಕ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ https://karresults.nic.in ಜಾಲತಾಣದಲ್ಲಿ ಗುರುವಾರ ಬೆಳಗ್ಗೆ 10.30 ಗಂಟೆಯ ನಂತರ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

- Advertisement -

Related news

error: Content is protected !!