- Advertisement -
- Advertisement -
ನವದೆಹಲಿ: ದೇಶದಲ್ಲಿ ಕೊರೊನಾ ರಣಕೇಕೆ ಹಾಕುತ್ತಿದೆ. ಮೊದಲ ಬಾರಿಗೆ ಒಂದೇ ದಿನ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 27,114 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಸಚಿವಾಲಯ ಮಾಹಿತಿ ಪ್ರಕಾರ, ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 8,20,916ಕ್ಕೆ ಏರಿಕೆಯಾಗಿದೆ. 24 ಗಂಟೆಗಳಲ್ಲಿ 519 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 22,123ಕ್ಕೆ ಏರಿಕೆಯಾಗಿದೆ.
ಇನ್ನು ನಿನ್ನೆ 19,873 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಗುಣಮುಖರಾದವರ ಸಂಖ್ಯೆ 5,15,386 ಆಗಿದ್ದರೆ ಇನ್ನೂ 2,83,407 ಪ್ರಕರಣಗಳು ಸಕ್ರೀಯವಾಗಿದ್ದು, ಈ ಸೋಂಕಿತರು ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.
- Advertisement -