Sunday, August 2, 2026
spot_imgspot_img
spot_imgspot_img

ನಾಝ್ಕಾ ಲೈನ್ಸ್‌ ವೀಕ್ಷಣಾ ಹಾರಾಟದ ವೇಳೆ ಪ್ರವಾಸಿ ವಿಮಾನ ಪತನ: 13 ಮಂದಿ ಮೃತ್ಯು

- Advertisement -
- Advertisement -

ಲಿಮಾ: ದಕ್ಷಿಣ ಅಮೇರಿಕಾದ ಪೆರು ದೇಶದ ವಿಶ್ವವಿಖ್ಯಾತ ಯುನೆಸ್ಕೋ ವಿಶ್ವ ಪರಂಪರೆ ತಾಣವಾದ ನಾಜ್ಕಾ ಲೈನ್ಸ್ ವೀಕ್ಷಣೆಗೆ ತೆರಳಿದ್ದ ಪ್ರವಾಸಿ ವಿಮಾನವೊಂದು ಪತನಗೊಂಡ ಪರಿಣಾಮ, ವಿಮಾನದಲ್ಲಿದ್ದ 11 ವಿದೇಶಿ ಪ್ರವಾಸಿಗರು ಹಾಗೂ ಇಬ್ಬರು ಸಿಬ್ಬಂದಿ ಸೇರಿ ಒಟ್ಟು 13 ಮಂದಿ ಸಾವನ್ನಪ್ಪಿರುವುದಾಗಿ ಪೆರುವಿನ ಸಾರಿಗೆ ಮತ್ತು ಸಂವಹನ ಸಚಿವಾಲಯ ಅಧಿಕೃತವಾಗಿ ದೃಢಪಡಿಸಿದೆ.

ಏರೋಡಿಯಾನಾ’ ವಿಮಾನಯಾನ ಸಂಸ್ಥೆಗೆ ಸೇರಿದ ಸೆಸ್ನಾ ಕ್ಯಾರವಾನ್ C-208 ಮಾದರಿಯ ಸಣ್ಣ ಪ್ರವಾಸಿ ವಿಮಾನವು ನಾಜ್ಕಾ ಏರ್‌ಡ್ರೋಮ್‌ನಿಂದ ಹಾರಾಟ ಆರಂಭಿಸಿತ್ತು. ಮಧ್ಯಾಹ್ನ ಸುಮಾರು 1 ಗಂಟೆ ವೇಳೆಗೆ ಪ್ಯೂಬ್ಲೊ ನ್ಯೂಯೆವೊ ಜಿಲ್ಲೆಯ ಸೊಕೊಸ್ ಪ್ರದೇಶದ ಮೇಲೆ ಹಾರುತ್ತಿದ್ದಾಗ, ಸಿಬ್ಬಂದಿ ನಿಯಂತ್ರಣ ಕೊಠಡಿಗೆ ತುರ್ತು ಪರಿಸ್ಥಿತಿಯ ಸಂದೇಶ ರವಾನಿಸಿದ್ದರು. ಆದರೆ ಕೆಲವೇ ಕ್ಷಣಗಳಲ್ಲಿ ವಿಮಾನದೊಂದಿಗೆ ಸಂಪರ್ಕ ಸಂಪೂರ್ಣ ಕಡಿದುಬಿದ್ದು, ಬಳಿಕ ಅದು ನೆಲಕ್ಕೆ ಅಪ್ಪಳಿಸಿತು.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ರಾಷ್ಟ್ರೀಯ ಪೊಲೀಸ್, ನಾಗರಿಕ ವಿಮಾನಯಾನ ನಿರ್ದೇಶನಾಲಯ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಆದರೆ ವಿಮಾನ ಸಂಪೂರ್ಣ ನಜ್ಜುಗುಜ್ಜಾಗಿದ್ದರಿಂದ ಯಾರೊಬ್ಬರೂ ಬದುಕುಳಿಯಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಾಯುಯಾನ ಅಪಘಾತ ತನಿಖಾ ಆಯೋಗವು ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದು, ವಿಮಾನ ಪತನಕ್ಕೆ ತಾಂತ್ರಿಕ ದೋಷ ಕಾರಣವೇ ಅಥವಾ ಪ್ರತಿಕೂಲ ಹವಾಮಾನವೇ ಕಾರಣವೇ ಎಂಬುದನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದೆ ಎಂಬುದಾಗಿ ವರದಿಯಿಂದ ತಿಳಿದುಬಂದಿದೆ.

- Advertisement -

Related news

error: Content is protected !!