Friday, May 10, 2024
spot_imgspot_img
spot_imgspot_img

ಟ್ರ್ಯಾಕ್ಟರ್- ಕಾರು ಡಿಕ್ಕಿ; ಚಾಲಕ ಮೃತ್ಯು..!

- Advertisement -G L Acharya panikkar
- Advertisement -

ಮಾರುತಿ 800 ಕಾರು ಮತ್ತು ಟ್ರ್ಯಾಕ್ಟ‌ರ್ ನಡುವೆ ಅಪಘಾತ ಸಂಭವಿಸಿದ್ದು ಕಾರು ಚಾಲಕನ ಸ್ಥಿತಿ ಗಂಭೀರಗೊಂಡು ಸಾವನ್ನಪ್ಪ್ಪಿರುವ ಘಟನೆ ಮುತ್ತಿಗೆಪುರ ಎಂಬಲ್ಲಿ ನಡೆದಿದೆ.

ಮೃತಪಟ್ಟ ಯುವಕ ಬೇಲೂಕು ತಾಲೂಕಿನ ಚೀಕನಹಳ್ಳಿ ಗ್ರಾಮದ ದಿ. ಹಾಲಪ್ಪ ಎಂಬವರ ಪುತ್ರ ಕೀರ್ತಿ(21) ಎಂದು ಗುರುತಿಸಲಾಗಿದೆ.

ಚೀಕನಹಳ್ಳಿ ತನ್ನ ಮನೆಯಿಂದ ಚಿಕ್ಕಳ್ಳದ ತೋಟಕ್ಕೆ ಮಾರುತಿ 800 ಕಾರಿನಲ್ಲಿ ತೆರಳುತ್ತಿದ್ದಾಗ ಮೂಡಿಗೆರೆ ಸಮೀಪದ ಮುತ್ತಿಗೆಪುರದಲ್ಲಿ ಎದುರಿನಿಂದ ಬಂದ ಟ್ರ್ಯಾಕ್ಟರ್ ಗೆ ಮುಖಾಮುಖಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿತ್ತು. ಈತ ಮೂಡಿಗೆರೆ ಸಮೀಪದ ಚಿಕ್ಕಳ್ಳ ಎಂಬಲ್ಲಿ ಕಾಫಿ ಎಸ್ಟೇಟ್ ಒಂದರಲ್ಲಿ ರೈಟರ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಗಾಯಗೊಂಡ ಚಾಲಕನಿಗೆ ಮೂಡಿಗೆರೆ ಎಂ.ಜಿ.ಎಂ. ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಅಂಬುಲೆನ್ಸ್ ಮೂಲಕ ಕರೆದೊಯ್ಯುವ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ. ನಂತರ ಮೃತದೇಹವನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಟ್ರ್ಯಾಕ್ಟರ್ ಚಿಕ್ಕಮಗಳೂರು ತಾಲೂಕು ಹಾಂದಿ ಮೂಲದ ವ್ಯಕ್ತಿಗೆ ಸೇರಿದೆಂದು ತಿಳಿದು ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -

Related news

error: Content is protected !!