Tuesday, July 21, 2026
spot_imgspot_img
spot_imgspot_img

ಟ್ರ‍್ಯಾಕ್ಟರ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ – ತಂದೆ, ಮಗಳು ಸ್ಥಳದಲ್ಲೇ ಸಾವು

- Advertisement -
- Advertisement -

ವಿಜಯಪುರ: ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್‌ನಲ್ಲಿದ್ದ ತಂದೆ-ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಿಡಗುಂದಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಮುದ್ದೇಬಿಹಾಳ ಕ್ರಾಸ್ ಬಳಿ ನಡೆದಿದೆ.

ಟ್ರ್ಯಾಕ್ಟರ್‌ನಲ್ಲಿ ಕಾರ್ಮಿಕರು ಕಬ್ಬು ಕಟಾವಿಗೆಂದು ಇಂಡಿಯಿಂದ ಮಂಡ್ಯಕ್ಕೆ ತೆರಳುತ್ತಿದ್ದರು. ಸ್ಪೀಡ್ ಬ್ರೇಕರ್ ಇದ್ದ ಹಿನ್ನೆಲೆ ಚಾಲಕ ಟ್ರ್ಯಾಕ್ಟರ್ ನಿಧಾನವಾಗಿ ಚಲಾಯಿಸಿದ್ದಾನೆ. ಈ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಟ್ರ‍್ಯಾಕ್ಟರ್‌ಗೆ ಗುದ್ದಿದ್ದು, ಪರಿಣಾಮ ಟ್ರ್ಯಾಕ್ಟರ್‌ನಲ್ಲಿದ್ದ ತಂದೆ-ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಹಾಗೂ ಮೃತರನ್ನು ನಿಡಗುಂದಿ ಆಸ್ಪತ್ರೆಗೆ ರವಾನಿಸಲಾಗಿದೆ. ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!