- Advertisement -
- Advertisement -
ಚಿಕ್ಕಮಗಳೂರು: ಶೃಂಗೇರಿ ಶಾರದಾಂಬೆ ದೇಗುಲದಲ್ಲಿ ವಸ್ತ್ರ ಸಂಹಿತೆ ಜಾರಿಯಾದ ಬೆನ್ನಲ್ಲೇ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹೊರನಾಡಿನಲ್ಲಿ ನೆಲೆಸಿರುವ ಅನ್ನಪೂರ್ಣೇಶ್ವರಿ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆಯನ್ನು ಕಡ್ಡಾಯಗೊಳಿಸಲಾಗಿದೆ.
ಗಂಡಸರು ಶಲ್ಯ, ಪ್ಯಾಂಟ್, ಪಂಚೆ ಧರಿಸಬೇಕು. ಹೆಣ್ಣು ಮಕ್ಕಳು ಸೀರೆ ಹಾಗೂ ಚೂಡಿದಾರ ಧರಿಸುವಂತೆ ದೇವಾಲಯದ ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಸಾಂಪ್ರದಾಯಿಕ ಉಡುಗೆಯಲ್ಲಿ ಬರದಿದ್ದರೆ ದೇವಸ್ಥಾನದ ಒಳಗೆ ಪ್ರವೇಶವಿಲ್ಲ ಎಂದು ಅಡಳಿತ ಮಂಡಳಿ ತಿಳಿಸಿದೆ.
ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹೊರನಾಡಿನಲ್ಲಿ ನೆಲೆಸಿರುವ ಅನ್ನಪೂರ್ಣೇಶ್ವರಿ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆ ಕಡ್ಡಾಯಗೊಳಿಸಿದ್ದು, ಭಕ್ತರು ಸಹಕರಿಸುವಂತೆ ದೇವಾಲಯದ ಆಡಳಿತ ಮಂಡಳಿ ಮನವಿ ಮಾಡಿದೆ.
- Advertisement -