- Advertisement -
- Advertisement -


ಹಾಸನ: ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಭೀಕರ ದುರಂತ ಸಂಭವಿಸಿದೆ. ಮೆರವಣಿಗೆ ಹೋಗುತ್ತಿದ್ದವರ ಮೇಲೆ ಟ್ರಕ್ ಹರಿದು 6 ಮಂದಿ ಮೃತಪಟ್ಟಿದ್ದಾರೆ.
ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೊಸಳೆಹೊಸಳ್ಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇವರು ವಿದ್ಯಾಭ್ಯಾಸ ಮಾಡುತ್ತಿದ್ದರು.
ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಹಾಸನದಿಂದ ಹೊಳೆನರಸೀಪುರದ ಕಡೆಗೆ ಕಂಟೇನರ್ ವಾಹನ ಹೋಗುತ್ತಿತ್ತು. ಈ ವೇಳೆ ಬೈಕ್‌ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಮೆರವಣಿಗೆ ಹೋಗುತ್ತಿದ್ದವರ ಮೇಲೆ ವಾಹನ ನುಗ್ಗಿದೆ.
ಚಾಲಕ ಭುವನೇಶ್‌ಗೂ ಗಂಭೀರ ಗಾಯಗಳಾಗಿವೆ. ಹೊಳೆನರಸೀಪುರ ತಾಲ್ಲೂಕಿನ ಕಟ್ಟೆಬೆಳಗುಲಿಯ ಚಾಲಕ ಭುವನೇಶ್‌ನನ್ನು ಹಾಸನದ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
- Advertisement -








