

ವಿಟ್ಲ: ದ.ಕ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ಎಸ್.ಐ ಗಳ ವರ್ಗಾವಣೆ ಮಾಡಿ ಪಶ್ಚಿಮ ವಲಯ ಪೊಲೀಸ್ ಉಪ ಮಹಾನಿರೀಕ್ಷಕರು ಆದೇಶ ಹೊರಡಿಸಿದ್ದು, ವಿಟ್ಲ ಪೊಲೀಸ್ ಠಾಣೆಯ ಎಸ್.ಐ ರುಕ್ಮ ನಾಯ್ಕ್ ಅವರನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದಾರೆ.
ವಿಟ್ಲ ಪೊಲೀಸ್ ಠಾಣೆಯ ಎಸ್.ಐ ರುಕ್ಮ ನಾಯ್ಕ್ ಅವರನ್ನು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ವರ್ಗಾವಣೆಗೊಳಿಸಿ ಸುಳ್ಯದ ರತ್ನ ಕುಮಾರ್ ಅವರನ್ನು ವಿಟ್ಲ ಪೊಲೀಸ್ ಠಾಣೆಗೆ ವರ್ಗಾವಣೆಗೊಳಿಸಿದ್ದಾರೆ.
ಪುತ್ತೂರು ನಗರ ಪೊಲೀಸ್ ಠಾಣೆಯ ಎಸ್.ಐ ಸರಸ್ವತಿ ಬಿ.ಟಿ.ಅವರನ್ನು ಸುಳ್ಯಕ್ಕೆ, ಮಹಿಳಾ ಪೊಲೀಸ್ ಠಾಣೆಯ ಎಸ್.ಐ ಸೇಸಮ್ಮ ಕೆ.ಎಸ್ ಅವರನ್ನು ಪುತ್ತೂರು ನಗರ ಪೊಲೀಸ್ ಠಾಣೆಗೆ, ಬೆಳ್ಳಾರೆ ಪೊಲೀಸ್ ಠಾಣೆಯ ಎಸ್.ಐ ಶಿವಕುಮಾರ್ ಅವರನ್ನು ಮುರುಡೇಶ್ವರಕ್ಕೆ, ಬಂಟ್ವಾಳ ಪೊಲೀಸ್ ಠಾಣೆಯ ಧನರಾಜ್ ಅವರನ್ನು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಗೆ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಅಕ್ಷಯ ಡವಗಿ ಅವರನ್ನು ಕಡಬ ಪೊಲೀಸ್ ಠಾಣೆಗೆ, ಬಂಟ್ವಾಳದ ಸಂಜೀವ ಕೆ ಅವರನ್ನು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಗೆ, ಬಂಟ್ವಾಳದ ಮೂರ್ತಿ ಅವರನ್ನು ಬಂಟ್ವಾಳ ಗ್ರಾಮಾಂತರ ಠಾಣೆಗೆ ವರ್ಗಾಣೆಗೊಳಿಸಿ ಪಶ್ಚಿಮ ವಲಯ ಪೊಲಿಸ್ ಉಪ ಮಹಾನಿರೀಕ್ಷಕ ಡಾ.ಚಂದ್ರಗುಪ್ತ ಅವರು ಆದೇಶ ಹೊರಡಿಸಿದ್ದಾರೆ.